ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

ಮಂಗಳೂರು, ಸೆ.4: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಕನ್ನಡ ಶಾಲಾ ವಿದ್ಯಾರ್ಥಿಗಳಿಗಾಗಿ ಎಲ್ಲಾ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಉಚಿತ ಕನ್ನಡ ಪುಸ್ತಕಗಳನ್ನು ಎಡನೀರು ಮಠದಲ್ಲಿ ಬುಧವಾರ ರಾತ್ರಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.
ಪ್ರೊ. ಕೆ.ಸಿ ಶಿವಪ್ಪಅವರು ರಚಿಸಿದ ಮುದ್ದುರಾಮನ 10 ಆವೃತ್ತಿ ಕೃತಿಗಳನ್ನು ಕೂಡ ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ ಹೊರನಾಡು ಗಡಿ ಕನ್ನಡಿಗರ ಶೈಕ್ಷಣಿಕ ಮತ್ತು ಔದ್ಯೋಗಿಕ ಸೌಲಭ್ಯಗಳಿಗೆ ಸಂಬಂಧಿಸಿದ ಸುತ್ತೋಲೆಗಳ ಸಂಗ್ರಹ ಪುಸ್ತಕವನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಶೀಘ್ರದಲ್ಲಿ ಡಾ.ಕಯ್ಯಾರ ಕಿಞ್ಞಣ್ಣ ರೈ ಭವವನ್ನು ಲೋಕಾರ್ಪಣೆಗೊಳಿಸುವುದಾಗಿ ತಿಳಿಸಿದರು.
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ , ಶಾಸಕರಿಗೆ ಎಂ ಎ ನೆಲ್ಲಿಕುನ್ನು ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಮುಖ್ಯ ಅತಿಥಿಯಾಗಿದ್ದರು.
ಗಡಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯ ಕಟ್ಟೆ , ಕಾಸರಗೋಡು ಪತ್ರಕರ್ತರ ಸಂಘದ ಕಾರ್ಯದರ್ಶಿ ಅಕಿಲೇಶ್ ನಗುಮುಗಂ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಎಡನೀರು ಮಠದ ಚಾತುರ್ಮಾಸ್ಯದ-2025 ಅಂಗವಾಗಿ ಯಕ್ಷಗಾನ, ಭರತನಾಟ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು