Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ರಕ್ತದಾನ ಜೀವದಾನ

ರಕ್ತದಾನ ಜೀವದಾನ

ಇಂದು ‘ವಿಶ್ವ ರಕ್ತದಾನಿಗಳ ದಿನ’

ಡಾ. ಮುರಲೀ ಮೋಹನ್ ಚೂಂತಾರುಡಾ. ಮುರಲೀ ಮೋಹನ್ ಚೂಂತಾರು14 Jun 2023 12:53 PM IST
share
ರಕ್ತದಾನ ಜೀವದಾನ
ಇಂದು ‘ವಿಶ್ವ ರಕ್ತದಾನಿಗಳ ದಿನ’

ರಕ್ತದ ಗುಂಪನ್ನು ಕಂಡು ಹಿಡಿದು, ರಕ್ತವನ್ನು ಎಬಿಒ ಗುಂಪುಗಳಾಗಿ ವರ್ಗೀಕರಣ ಮಾಡುವ ಸಂಶೋಧನೆ ನಡೆಸಿ ರಕ್ತ ಪೂರಣ ಚಿಕಿತ್ಸಾ ಕ್ರಮಕ್ಕೆ ಅಡಿಪಾಯ ಹಾಕಿದ ಖ್ಯಾತ ವಿಜ್ಞಾನಿ ಡಾ. ಕಾರ್ಲ್ ಲ್ಯಾಂಡ್ ಸ್ಟೈನರ್ ಅವರ ಸ್ಮರಣಾರ್ಥವಾಗಿ ಅವರ ಜನ್ಮ ದಿನವಾದ ಜೂನ್ 14 ರಂದು ಪ್ರತೀ ವರ್ಷ ‘ವಿಶ್ವ ರಕ್ತದಾನಿಗಳ ದಿನ’ ಎಂದು ಆಚರಿಸಲಾಗುತ್ತದೆ. ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ಈ ಆಚರಣೆಯ ಆಶಯ.

ಜಗತ್ತಿನ ಅತೀ ದೊಡ್ಡ ಸಂಶೋ ಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವು ದಕ್ಕೆ ‘‘ರಕ್ತದಾನ’’ ಎನ್ನುವರು. ರಕ್ತಕ್ಕೆ ವರ್ಷವಿಡಿ ನಿರಂತರವಾಗಿ ಬೇಡಿಕೆ ಇರುತ್ತದೆ. ಯಾಕೆಂದರೆ ಅಪಘಾತಗಳು, ತುರ್ತು ಶಸ್ತ್ರಚಿಕಿತ್ಸೆ ಗಳ ಸಂದರ್ಭಗಳು ಒದಗುತ್ತಲೇ ಇರುತ್ತದೆ. ಜೊತೆಯಲ್ಲಿ ಅರ್ಬುಧ ರೋಗಿಗಳು, ಹಿಮೋಫಿಲಿಯಾ, ಥಾಲೆಸೆಮಿಯ ಮುಂತಾದ ರೋಗಿಗಳು ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ. ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35ರಿಂದ 40 ದಿನಗಳ ವರೆಗೆ ಮಾತ್ರ ತನ್ನ ಶಕ್ತಿಯನ್ನು ಉಳಿಸಿಕೊಂಡಿರುತ್ತದೆ. ಆ ಬಳಿಕ ಅದು ಉಪಯೋಗಕ್ಕೆ ಬರುವುದಿಲ್ಲ. ಅದ್ದರಿಂದ ಜನತೆ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ನಿರಂತರವಾಗಿ ಅವಶ್ಯಕತೆ ಇರುವವರಿಗೆ ರಕ್ತನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆ.

► ಯಾರು ರಕ್ತದಾನ ಮಾಡಬಹುದು?

* ಹೆಣ್ಣು ಗಂಡೆಂಬ ಬೇಧಭಾವವಿಲ್ಲದೆ 18ರಿಂದ 65 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು.

* ಗಂಡಸರು 3 ತಿಂಗಳಿಗೊಮ್ಮೆ ಮತ್ತು ಹೆಂಗಸರು 6 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.

* ರಕ್ತದಾನಿಯ ತೂಕ ಕನಿಷ್ಠ 45 ಕೆ.ಜಿ.ಗಿಂತ ಜಾಸ್ತಿ ಇರಬೇಕು.

* ರಕ್ತದಾನಿಯ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12.5 ಗ್ರಾಂಗಿಂತ ಹೆಚ್ಚಿರಬೇಕು.

► ಯಾರು ರಕ್ತದಾನ ಮಾಡಬಾರದು?

ಅತಿಯಾದ ಅನಿಯಂತ್ರಿತ ಅಧಿಕ ರಕ್ತದೊತ್ತಡ ಮತ್ತು ಅನಿಯಂತ್ರಿತ ಸಕ್ಕರೆ ಕಾಯಿಲೆಯಿಂದ ಬಳಲುವವರು ರಕ್ತದಾನ ಮಾಡಬಾರದು.

ಮದ್ಯಪಾನ ಮತ್ತು ಮಾದಕ ದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು.

ಮಹಿಳೆಯರು ಮುಟ್ಟಿನ ಸಮಯದಲ್ಲಿ, ಗರ್ಭಿಣಿಯಾಗಿ ದ್ದಾಗ, ಎದೆಹಾಲು ಉಣಿಸುತ್ತಿರು ವಾಗ ಮತ್ತು ಹೆರಿಗೆಯ ನಂತರ 6 ತಿಂಗಳು ರಕ್ತದಾನ ಮಾಡಬಾರದು.

ಕಾಯಿಲೆಯ ವಿರುದ್ಧ ಲಸಿಕೆ ಪಡೆದಿದ್ದರೆ, ಅಂತಹವರು ಲಸಿಕೆ ಪಡೆದ 4 ವಾರಗಳವರೆಗೆ ರಕ್ತದಾನ ಮಾಡಬಾರದು.

ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆದ ನಂತರದ 3 ತಿಂಗಳು ರಕ್ತದಾನ ಮಾಡಬಾರದು.

ಹಿಂದಿನ 3 ತಿಂಗಳಲ್ಲಿ ತಾವೇ ಯಾವುದೇ ರಕ್ತ ಅಥವಾ ರಕ್ತದ ಅಂಶ ಪಡೆದಿದ್ದರೆ ಅಂತಹವರು ರಕ್ತದಾನ ಮಾಡಬಾರದು.

ಅರ್ಬುದ ರೋಗ, ಹೃದಯ ಸಂಬಂಧಿ ಕಾಯಿಲೆ, ಅಸಹಜ ರಕ್ತಸ್ರಾವ, ಮಧುಮೇಹ, ಮೂತ್ರಪಿಂಡದ ಕಾಯಿಲೆ ಮತ್ತು ಯಕೃತ್‌ಗೆ ಸಂಬಂಧಿಸಿದ ಕಾಯಿಲೆ, ಹೆಪಟೈಟಿಸ್ ‘ಬಿ’ ಮತ್ತು ‘ಸಿ’ ಕಾಯಿಲೆ, ಕಾಮಾಲೆ, ಎಚ್.ಐ.ವಿ. ಮತ್ತು ಯಾವುದೇ ಲೈಂಗಿಕ ರೋಗ ವಿರುವವರು ರಕ್ತದಾನ ಮಾಡಬಾರದು.

ಯಾವುದೇ ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ 6 ತಿಂಗಳವರೆಗೆ, ಚಿಕ್ಕ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾದವರು ಮುಂದಿನ 3 ತಿಂಗಳವರೆಗೆ ರಕ್ತದಾನ ಮಾಡಬಾರದು.

share
ಡಾ. ಮುರಲೀ ಮೋಹನ್ ಚೂಂತಾರು
ಡಾ. ಮುರಲೀ ಮೋಹನ್ ಚೂಂತಾರು
Next Story
X