ಬಾಗಲಕೋಟೆ | ಶಾಲೆಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಫಲ, ಜಾತಿ ನಿಂದನೆ ಆರೋಪ; ಮುಖ್ಯ ಶಿಕ್ಷಕಿ ವಿರುದ್ಧ ವಿದ್ಯಾರ್ಥಿಗಳಿಂದ ಧರಣಿ

ಬಾಗಲಕೋಟೆ : ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ವಿರುದ್ಧ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಾಗಲಕೋಟೆ ನಗರದ ನವನಗರ ಸೆಕ್ಟರ್ ನಂ.43ರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿವುದಾಗಿ ವರದಿಯಾಗಿದೆ.
ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಕಾಪಸೆ ಅವರ ವಿರುದ್ಧ ಮೂಲಭೂತ ಸೌಲಭ್ಯಗಳ ಕಲ್ಪಿಸುವಲ್ಲಿ ವಿಫಲ, ಜಾತಿ ನಿಂದನೆ ಮಾಡುತ್ತಿದ್ದಾರೆಯೆಂಬ ಆರೋಪ ವಿದ್ಯಾರ್ಥಿಗಳಿಂದ ಕೇಳಿಬಂದಿದೆ.
ಈ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಅವರು ಮಕ್ಕಳೊಂದಿಗೆ ಮಾತನಾಡಿ ವಿಷಯ ಕುರಿತು ವಿವರ ಪಡೆದಿದ್ದಾರೆ. “ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು” ಎಂದು ಬಡದಾನಿ ತಿಳಿಸಿದ್ದಾರೆ.
ಇದೇ ವೇಳೆ, ವಿದ್ಯಾರ್ಥಿಗಳು ನವನಗರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ, ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು
Next Story