ಬಾಗಲಕೋಟೆ | ರ‍್ಯಾಗಿಂಗ್ ಗೆ ಪದವಿ ಕಾಲೇಜು ವಿದ್ಯಾರ್ಥಿನಿ ಬಲಿ

ಬಾಗಲಕೋಟೆ: ರ‍್ಯಾಗಿಂಗ್ ನಿಂದ ಬೇಸತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಗುಳೇದಗುಡ್ಡ ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗುಳೇದಗುಡ್ಡ ಪಟ್ಟಣದ ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ(21) ಆತ್ಮಹತ್ಯೆ ಮಾಡಿಕೊಂಡವರು.
ಡೆತ್ ನೋಟ್ ಬರೆದಿಟ್ಟಿರುವ ಅಂಜಲಿ, ಮೂವರು ವಿದ್ಯಾರ್ಥಿಗಳ ಹೆಸರು, ಮೊಬೈಲ್ ಸಂಖ್ಯೆಯನ್ನು ಉಲ್ಲೇಖಿಸಿ, ಅವರು ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ತನ್ನ ಸಾವಿಗೆ ಅವರೇ ಕಾರಣ ಎಂದು ಬರೆದಿದ್ದಾರೆ.
ಡೆತ್ ನೋಟ್ ನಲ್ಲಿದೆ?
"ನನ್ನ ಸಾವಿಗೆ ಕಾರಣವಾದ ಈ ಮೂವರು ವ್ಯಕ್ತಿಗಳು ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು ನನ್ನ ಬಗ್ಗೆ ನನ್ನನ್ನು ಮಾನಸೀಕವಾಗಿ ಕುಗ್ಗಿಸಿದ್ದಾರೆ. ಮತ್ತು ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. Saying Good Bye ಎಂದು ಸಹಿ ಮಾಡಿದ್ದಾರೆ.
ಈ ಬಗ್ಗೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.