ದೊಡ್ಡಬಳ್ಳಾಪುರ | ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ: ಬಾಲಕ ಸಾವು, 6 ಮಂದಿಗೆ ಗಾಯ

ಸಾಂದರ್ಭಿಕ ಚಿತ್ರ | PC : freepik
ದೊಡ್ಡಬಳ್ಳಾಪುರ: ಗಣೇಶ ಮೆರವಣಿಗೆಯ ವೇಳೆ ಪಟಾಕಿ ಸ್ಫೋಟಗೊಂಡು ಬಾಲಕನೊಬ್ಬ ದುರ್ಮರಣಕ್ಕೆ ಒಳಗಾಗಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಆರು ಮಂದಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ.
ಈ ಘಟನೆ ದೊಡ್ಡಬಳ್ಳಾಪುರದ ಮುತ್ತೂರು ವಾರ್ಡ್ನಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ನಡೆದಿದೆ. ‘ಫ್ರೆಂಡ್ಸ್ ವಿನಾಯಕ ಬಳಗ’ದ ಸದಸ್ಯರು ಗಣೇಶನ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆಯ ವೇಳೆ ಬಳಸಲಾಗುತ್ತಿದ್ದ ಪೋರ್ ಲಿಫ್ಟ್ ವಾಹನದಲ್ಲಿ ಪಟಾಕಿಗಳನ್ನು ಇರಿಸಲಾಗಿತ್ತು. ಈ ಪಟಾಕಿಗಳು ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ.
ಸ್ಫೋಟದ ಪರಿಣಾಮವಾಗಿ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಬಾಲಕನೊಬ್ಬ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದರು.