Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರದ ನಿರ್ಧಾರ ತಿಳಿಸಲು 10 ದಿನಗಳ...

ಸರಕಾರದ ನಿರ್ಧಾರ ತಿಳಿಸಲು 10 ದಿನಗಳ ಕಾಲಾವಕಾಶ ಅಗತ್ಯ: ಸಿದ್ದರಾಮಯ್ಯ

ಚನ್ನರಾಯಪಟ್ಟಣ ಗ್ರಾಮದ ರೈತ ಮುಖಂಡರೊಂದಿಗೆ ಸಿಎಂ ಸಭೆ

ವಾರ್ತಾಭಾರತಿವಾರ್ತಾಭಾರತಿ4 July 2025 2:58 PM IST
share
ಸರಕಾರದ ನಿರ್ಧಾರ ತಿಳಿಸಲು 10 ದಿನಗಳ ಕಾಲಾವಕಾಶ ಅಗತ್ಯ: ಸಿದ್ದರಾಮಯ್ಯ

ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧ ಸಭಾಂಗಣದಲ್ಲಿ ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಸಭೆ ನಡೆಸಿದರು.

ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ. ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ. ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರಕಾರದ ನಿಲುವು ಸ್ಪಷ್ಟಪಡಿಸಲಾಗುವುದು ಎಂದು ತಿಳಿಸಿದರು.

ನಾವು ಪ್ರಜಾಪ್ರಭುತ್ವದಲ್ಲಿ ಮತ್ತು ಸಂವಾದದಲ್ಲಿ ನಂಬಿಕೆಯಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಸರಕಾರ ಮಾಡಿಲ್ಲ. ನಾನೂ ರೈತ ಸಂಘದಲ್ಲಿದ್ದವನು ಎಂದು ಸಿದ್ದರಾಮಯ್ಯ ಹೇಳಿದರು.

ಸಚಿವರಾದ ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X