ನೆಲಮಂಗಲ | ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು

ಬೆಂಗಳೂರು : ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಬೆಳಗ್ಗಿನಜಾವ 3:30 ಗಂಟೆ ಸುಮಾರಿಗೆ ನಡೆದಿವುದಾಗಿ ವರದಿಯಾಗಿದೆ.
ಮೃತರನ್ನು ಲಾರಿಯಲ್ಲಿದ್ದ ಸೀನಪ್ಪ(50), ನಝೀರ್ ಅಹ್ಮದ್(36), ಆನಂದ್(42) ಎಂದು ಗುರುತಿಸಲಾಗಿದೆ.
ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಈ ವೇಳೆ ಟೈರ್ ಪಂಚರ್ ಆಗಿದ್ದರಿಂದ ರಸ್ತೆ ಲಾರಿಯನ್ನು ಬದಿ ನಿಲ್ಲಿಸಲಾಗಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story