ಬಳ್ಳಾರಿ | ಮೇ 16ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಸಾಂದರ್ಭಿಕ ಚಿತ್ರ
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ, 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಮೇ 16 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು :
110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ಗಳು ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story