ಬೀದರ್ | ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

ಬೀದರ್: ಖಾಶೆಂಪೂರ ಪಾನ್ ಗ್ರಾಮದಲ್ಲಿ ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಗಂಗಮ್ಮ ಶಂಕರ್ ಮಚಕುರಿ ಅವರ ಮನೆಗೆ ಅರಣ್ಯ, ಜೀವಿಶಾಸ್ತ್ರ, ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ, ಕಷ್ಟಗಳನ್ನು ಎದುರಿಸಿ ಜೀವನದಲ್ಲಿ ಮುನ್ನುಗ್ಗಬೇಕು ಎಂದು ಸಚಿವರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಅವರು ಜಿಲ್ಲಾಡಳಿತಕ್ಕೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿ, ಸಂತ್ರಸ್ತರಿಗೆ ಮನೆ ನೀಡುವ ಕುರಿತು ಸ್ಥಳೀಯ ಗ್ರಾಮ ಪಂಚಾಯತ್ ಪಿಡಿಓ ಪರಿಶೀಲನೆ ನಡೆಸುವಂತೆ ನಿರ್ದೇಶಿಸಿದರು.
Next Story