ಬೀದರ್‌ನಲ್ಲಿ ʼಸ್ವಚ್ಛತೆಯೇ ಸೇವೆ – 2025ʼ ಅಭಿಯಾನಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ಬೀದರ್ : ಶ್ರೀಕ್ಷೇತ್ರ ನರಸಿಂಹ ಝರಣಿ ದೇವಾಲಯ ಆವರಣದಲ್ಲಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಸೆ.17 ರಿಂದ ಅ.2ರವರಗೆ ನಡೆಯುವ “ಸ್ವಚ್ಛತೆಯೇ ಸೇವೆ – 2025” ಅಭಿಯಾನಕ್ಕೆ ಚಾಲನೆ ನೀಡಿದರು.
ಅಭಿಯಾನ ಆರಂಭಿಸಿ ಮಾತನಾಡಿದ ಅವರು, “ಸ್ವಚ್ಛತೆ ಕೇವಲ ಅಭಿಯಾನವಲ್ಲ, ಇದು ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು. ಮಹಾತ್ಮ ಗಾಂಧೀಜಿಯವರ ಕನಸಾದ ಸ್ವಚ್ಛ ಹಾಗೂ ಆರೋಗ್ಯಕರ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.
ಮನೆ, ಬೀದಿ ಹಾಗೂ ಪರಿಸರವನ್ನು ಸ್ವಚ್ಛವಾಗಿಡುವುದರ ಮೂಲಕ ಗಾಂಧೀಜಿಯವರ ಕನಸನ್ನು ನಿಜ ಮಾಡಬಹುದು ಎಂದು ಜನತೆಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ್ ಬದೋಲೆ, ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್, ನಗರಾಭಿವೃದ್ಧಿ ಕೋಶದ ಎಇಇ ಅರುಣಕುಮಾರ್ ಹಾಗೂ ಎಸ್‌ಎಸ್‌ಜಿ ಮಹಿಳಾ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.