ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ : ಸಚಿವ ಈಶ್ವರ್ ಖಂಡ್ರೆ

ಸಚಿವ ಈಶ್ವರ್ ಖಂಡ್ರೆ
ಬೀದರ್: ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿ ಪುನರುತ್ಥಾನಗೊಳ್ಳುತ್ತದೆ ಮತ್ತು ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗುತ್ತಾರೆ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರು ಹಾಗೂ ಜಿಲ್ಲೆ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಹೇಳಿದ್ದಾರೆ.
ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಮೂಲಕ ಬಿಜೆಪಿ ಆಡಳಿತ ನಡೆಸುತ್ತಿದೆ. ಮತದಾರರ ಪಟ್ಟಿ ಬದಲಾವಣೆ ಮಾಡಿ, ಚುನಾವಣಾ ಆಯೋಗವನ್ನು ದುರ್ಬಲಗೊಳಿಸುವ ಮೂಲಕ ಜನರಿಗೆ ಬಿಜೆಪಿ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.
ಈ ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರು ಹೋರಾಟ ನಡೆಸುತ್ತಿದ್ದು, ಅವರಿಗೆ ದೇಶಾದ್ಯಂತ ಜನಬೆಂಬಲ ದೊರೆಯುತ್ತಿದೆ. ಇದೇ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದು, ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ. ಆಗ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ನಿಲ್ಲುತ್ತದೆ ಎಂದು ಸಚಿವರು ಹೇಳಿದರು.