Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸ ಯುವ...

ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸ ಯುವ ಪೀಳಿಗೆ ಅರಿತುಕೊಳ್ಳಬೇಕು : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ17 Sept 2025 3:14 PM IST
share
ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸ ಯುವ ಪೀಳಿಗೆ ಅರಿತುಕೊಳ್ಳಬೇಕು : ಸಚಿವ ಈಶ್ವರ್ ಖಂಡ್ರೆ

ಬೀದರ್: ಕಲ್ಯಾಣ ಕರ್ನಾಟಕವು ಎರಡು ಸಲ ಸ್ವಾತಂತ್ರ್ಯ ಪಡೆದಿದೆ. ಈ ವಿಮೋಚನೆಯ ಇತಿಹಾಸವನ್ನು ಇಂದಿನ ಯುವ ಪೀಳಿಗೆ ತಪ್ಪದೇ ಅರಿತುಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

1947ರ ಆಗಸ್ಟ್ 15ರಂದು ಇಡೀ ಭಾರತ ಸ್ವಾತಂತ್ರ್ಯ ಪಡೆದರೂ, ಹೈದರಾಬಾದ್ ಕರ್ನಾಟಕ ಭಾಗ ನಿಜಾಮರ ಆಳ್ವಿಕೆ ಮತ್ತು ರಜಾಕಾರರ ದಬ್ಬಾಳಿಕೆಯಿಂದ ವಿಮುಕ್ತವಾಗಿರಲಿಲ್ಲ. ಕೊನೆಗೂ ಸೇನಾ ಕಾರ್ಯಾಚರಣೆ ಬಳಿಕ 1948ರ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಭಾರತ ಒಕ್ಕೂಟ ಸೇರಿತು. ಈ ಪೈಪೋಟಿಯ ಇತಿಹಾಸವನ್ನು ಇಂದಿನ ಯುವಜನತೆ ಅರಿತುಕೊಳ್ಳಬೇಕು” ಎಂದು ಸಚಿವರು ನೆನಪಿಸಿದರು.

ಅವರು ಗೋರ್ಟಾ ಹತ್ಯಾಕಾಂಡವನ್ನು ಉಲ್ಲೇಖಿಸಿ, ಅದನ್ನು “ಎರಡನೇ ಜಲಿಯನ್ ವಾಲಾಬಾಗ್” ಎಂದು ಕರೆಯಲಾಗುವುದರ ಹಿಂದಿರುವ ಭೀಕರತೆಯನ್ನು ವಿವರಿಸಿದರು.

ಸಚಿವ ಖಂಡ್ರೆ ಅವರು ಸಂವಿಧಾನದ 371 ಜೆ ತಿದ್ದುಪಡಿ ಮೂಲಕ ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ಪ್ರಸ್ತಾಪಿಸಿದರು. ಗ್ರೂಪ್ A ಮತ್ತು B ಹುದ್ದೆಗಳಿಗೆ 75%, ಗ್ರೂಪ್ C ಹುದ್ದೆಗಳಿಗೆ ಶೇ.80 ಮತ್ತು ಗ್ರೂಪ್ D ಹುದ್ದೆಗಳಿಗೆ ಶೇ.85ರಷ್ಟು ಮೀಸಲಾತಿ ಕಲ್ಯಾಣ ಕರ್ನಾಟಕದ ಜನರಿಗೆ ಸಿಗುತ್ತಿದೆ. ಹಾಗೆಯೇ ಇತರ ಜಿಲ್ಲೆಗಳಲ್ಲಿ ಶೇ.8 ಮೀಸಲಾತಿ ಲಭ್ಯ. ಶಿಕ್ಷಣ ಕ್ಷೇತ್ರದಲ್ಲಿಯೂ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸುಗಳಲ್ಲಿ ಶೇ.70 ಸೀಟುಗಳು ಈ ಭಾಗದ ವಿದ್ಯಾರ್ಥಿಗಳಿಗೆ ಮೀಸಲಿರುತ್ತವೆ ಎಂದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ತೀರ್ಮಾನ ಕೈಗೊಂಡಿರುವುದನ್ನು ಸಚಿವರು ಸ್ವಾಗತಿಸಿದರು. ಈ ಭಾಗದ ಏಳು ಜಿಲ್ಲೆಗಳ ದೀರ್ಘಕಾಲದ ಬೇಡಿಕೆ ಈ ಮೂಲಕ ಈಡೇರಲಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

ಅಲ್ಲದೆ, ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಸುಮಾರು 1 ಲಕ್ಷ ಹೇಕ್ಟರ್ ಬೆಳೆ ಹಾನಿಗೊಳಗಾಗಿದೆ. ಜಂಟಿ ಸಮೀಕ್ಷೆ ನಡೆಯುತ್ತಿದ್ದು, ಶೀಘ್ರದಲ್ಲೇ ರೈತರಿಗೆ ಪರಿಹಾರ ವಿತರಿಸಲಾಗುವುದು. ಈಗಾಗಲೇ ಮನೆ ಹಾನಿಗಳಿಗೆ ಪರಿಹಾರ ನೀಡಲಾಗಿದೆ. ರಸ್ತೆ ಮತ್ತು ಸೇತುವೆಗಳ ಮರುನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಸರ್ಕಾರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದ್ದು, ಅದರಲ್ಲಿ ಬೀದರ್ ಜಿಲ್ಲೆಗೆ ಮಾತ್ರ 500 ಕೋಟಿ ರೂ. ಹೆಚ್ಚುವರಿ ಅನುದಾನ ಸಿಗುತ್ತಿದೆ ಎಂದು ಹೇಳಿದರು.

ಬೆಳಿಗ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರ ಮೆರವಣಿಗೆಯು ಬಸವೇಶ್ವರ ವೃತ್ತದಿಂದ ನೆಹರು ಕ್ರೀಡಾಂಗಣದವರೆಗೆ ಸಾಗಿತು.

ಕಾರ್ಯಕ್ರಮದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಮಹಾನಗರ ಪಾಲಿಕೆ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ್ ಬದೋಲೆ, ಎಸ್‌ಪಿ ಪ್ರದೀಪ್ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಪ್ರೋಬೇಷನರಿ ಐಎಎಸ್ ಅಧಿಕಾರಿ ರಮ್ಯಾ, ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X