ಚಾಮರಾಜನಗರ | ಭೀಕರ ರಸ್ತೆ ಅಪಘಾತ : ಓರ್ವ ಬಾಲಕ ಮೃತ್ಯು, ಐವರು ಗಂಭೀರ

ಚಾಮರಾಜನಗರ : ಅಪ್ರಾಪ್ತ ವಯಸ್ಸಿನ ಬಾಲಕರು ಬೈಕ್‌ನಲ್ಲಿ ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದು ಐವರ ಸ್ಥಿತಿ ಗಂಭೀರವಾಗಿದೆ.
ಚಾಮರಾಜನಗರದ ಸೋಮವಾರಪೇಟೆ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ 4 ಅಪ್ರಾಪ್ತ ಬಾಲಕರು ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟುವಾಗ ಲಾರಿ ಅಡ್ಡಲಾಗಿ ಬಂದು ಅಪಘಾತವಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು 3 ಬಾಲಕರಿಗೆ ಗಂಭೀರವಾದ ಗಾಯಗಳಾಗಿವೆ.
ಈ ಸಂದರ್ಭದಲ್ಲಿ ಮಕ್ಕಳನ್ನು ತಪ್ಪಿಸಲು ಹೋದ ಲಾರಿ ಚಾಲಕ ಕಾರೊಂದಕ್ಕೆ ಡಿಕ್ಕಿಯೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರ ಸ್ಥಿತಿಯೂ ಗಂಭೀರವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಧಾವಿಸಿ ಗಾಯಾಳುಗಳನ್ನು ಸಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಇಬ್ಬರು ಬಾಲಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಲಾಗುತ್ತಿದೆ. ಸಿಮ್ಸ್ ಆಸ್ಪತ್ರೆ ಮತ್ತು ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.