Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಫಿನಾಡಿನಲ್ಲಿ ಮಾದರಿಯಾದ ಮುತ್ತಿಗೆಪುರ...

ಕಾಫಿನಾಡಿನಲ್ಲಿ ಮಾದರಿಯಾದ ಮುತ್ತಿಗೆಪುರ ಸರಕಾರಿ ಶಾಲೆ

ಮೂಲಸೌಕರ್ಯಗಳು, ಗುಣಮಟ್ಟದ ಶಿಕ್ಷಣ : ಶೈಕ್ಷಣಿಕ ದಾಖಲಾತಿಯೂ ಭರ್ತಿ

ಕೆ.ಎಲ್.ಶಿವು, ಚಿಕ್ಕಮಗಳೂರುಕೆ.ಎಲ್.ಶಿವು, ಚಿಕ್ಕಮಗಳೂರು24 Feb 2025 10:22 AM IST
share
ಕಾಫಿನಾಡಿನಲ್ಲಿ ಮಾದರಿಯಾದ ಮುತ್ತಿಗೆಪುರ ಸರಕಾರಿ ಶಾಲೆ

ಚಿಕ್ಕಮಗಳೂರು : ಸರಕಾರಿ ಶಾಲೆಗಳ ಬಗ್ಗೆ ಮಕ್ಕಳ ಪೋಷಕರು, ಸಾರ್ವಜನಿಕರಲ್ಲಿ ಅಸಡ್ಡೆ, ನಿರ್ಲಕ್ಷ್ಯದ ಮನೋಭಾವನೆ ಸಾಮಾನ್ಯ ಸಂಗತಿಯಾಗಿದೆ. ಆದರೆ, ಕಾಫಿನಾಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದು ಇದಕ್ಕೆ ಹೊರತಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಸದ್ಯ ಜಿಲ್ಲೆಯ ಇತರ ಸರಕಾರಿ ಶಾಲೆಗಳಿಗೆ ಮಾದರಿಯಾಗುತ್ತಿದೆ. ಸ್ಥಳೀಯ ಉದ್ಯಮಿ, ರಾಜ್ಯ, ವಿದೇಶಗಳ ಸಂಘ-ಸಂಸ್ಥೆಗಳು ಹಾಗೂ ದಾನಿಗಳ ನೆರವಿನಿಂದಾಗಿ ಈ ಶಾಲೆ ಸುಸಜ್ಜಿತ ಶಾಲಾ ಕೊಠಡಿಗಳೂ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಹಾಗೂ ಗುಣಮಟ್ಟದ ಶಿಕ್ಷಣದಿಂದಾಗಿ ಅಕ್ಕಪಕ್ಕದ ಗ್ರಾಮಗಳ ಪೋಷಕರು, ಸಾರ್ವಜನಿಕರ ಆಕರ್ಷಣೆಯ ಕೇಂದ್ರ ಬಿಂದುವಾಗಿ ಹೊರ ಹೊಮ್ಮುತ್ತಿದೆ. ಮುಖ್ಯವಾಗಿ ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲಕ ಮತ್ತು ಕಾಫಿ ರಫ್ತು ಉದ್ಯಮಿ ಸಂತೋಷ್ ಅವರ ಮಗ ಮುತ್ತಿಗೆಪುರದಲ್ಲಿರುವ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವುದು ಈ ಸರಕಾರಿ ಶಾಲೆಯ ಸಾಧನೆಗೆ ಹಿಡಿದ ಕನ್ನಡಿಯಾಗಿದೆ.

1973ರಲ್ಲಿ ಕೆಲವೇ ಕೆಲ ಮಕ್ಕಳೊಂದಿಗೆ ಆರಂಭವಾದ ಮುತ್ತಿಗೆಪುರ ಸರಕಾರಿ ಶಾಲೆಯ 1ರಿಂದ 8ನೇ ತರಗತಿವರೆಗೆ ಸದ್ಯ 363 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಸದ್ಯ 50 ವರ್ಷಗಳನ್ನು ಪೂರೈಸಿರುವ ಈ ಸರಕಾರಿ ಶಾಲೆ ಹಿಂದಿನಿಂದಲೂ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಶಾಲೆಯಾಗಿದೆ.

ಉದ್ಯಮಿ ಸಂತೋಷ್ ಅವರು ಚಿಕ್ಕಮಗಳೂರು ನಗರದಲ್ಲಿರುವ ಕಸ್ತೂರ್ ಬಾ ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ಮೋಹಿನಿ ಸಿದ್ದೇಗೌಡ ಅವರ ಪುತ್ರ. ಸರಕಾರಿ ಶಾಲೆಯಲ್ಲೇ ವ್ಯಾಸಂಗ ಮಾಡಿರುವ ಸಂತೋಷ್ ಅವರು ಮುತ್ತಿಗೆಪುರ ಸರಕಾರಿ ಶಾಲೆಗೆ ತಮ್ಮ ಪುತ್ರನನ್ನೂ ದಾಖಲಿಸುವ ಮೂಲಕ ಸರಕಾರಿ ಶಾಲೆಯ ಮೇಲಿನ ಅಭಿಮಾನ ಮೆರೆದಿದ್ದಾರೆ.

2.50 ಕೋಟಿ ರೂ. ದಾನ ನೀಡಿದ ಉದ್ಯಮಿ: ಕೊಡುಗೈ ದಾನಿಯೂ ಆಗಿರುವ ಸಂತೋಷ್ ಅವರು ತಮ್ಮ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಿದ್ದರೂ ಪ್ರಚಾರದಿಂದ ದೂರ ಉಳಿದಿರುವ ಅವರು, ಮುತ್ತಿಗೆಪುರ ಸರಕಾರಿ ಶಾಲೆಗೆ ಸುಮಾರು 2.50 ಕೋ. ರೂ. ವೆಚ್ಚದಲ್ಲಿ 8 ಸುಸಜ್ಜಿತ ಶಾಲಾ ತರಗತಿ ಕೊಠಡಿಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ. ಮುತ್ತಿಗೆಪುರ ಸರಕಾರಿ ಶಾಲೆಗೆ ಸರಕಾರದ ವಿವೇಕಾ ಯೋಜನೆಯಡಿ ೪ ಕೊಠಡಿಗಳ ನಿರ್ಮಾಣಕ್ಕೆ 56 ಲಕ್ಷ ರೂ. ಮಂಜೂರಾಗಿದ್ದು, ವಿವೇಕಾ ಯೋಜನೆಯ ಅನುದಾನ ಹಾಗೂ ಉದ್ಯಮಿ ಸಂತೋಷ್ ಅವರು ನೀಡಿರುವ 2.18 ಕೋ. ರೂ. ವೆಚ್ಚದಲ್ಲಿ ಒಟ್ಟು 12 ಸುಸಜ್ಜಿತ ಕೊಠಡಿಗಳನ್ನು ನಿರ್ಮಿಸಲಾಗಿದೆ. 12 ಕೊಠಡಿಗಳಿರುವ ಆಕರ್ಷಕ ಶೈಲಿಯ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿದ್ದು, ಫೆ.28ಕ್ಕೆ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಹಳೆಯ ಕಟ್ಟಡದಲ್ಲಿ ನಡೆಯುತ್ತಿದ್ದ ಶಾಲೆ ಸದ್ಯ ಅತ್ಯಾಧುನಿಕ ಸೌಕರ್ಯಗಳುಳ್ಳ, ಖಾಸಗಿ ಶಾಲೆಗಳಿಗೂ ಮಿಗಿಲಾದ ಸೌಕರ್ಯಗಳೊಂದಿಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಜ್ಜಾಗಿ ನಿಂತಿದೆ. ಶಾಲೆಯಲ್ಲಿ 12 ಶಿಕ್ಷಕರ ಹುದ್ದೆಗಳಿದ್ದು, ಪ್ರಭಾರಿ ಮುಖ್ಯೋಪಾಧ್ಯಾಯಿನಿ ಸೇರಿ ಸದ್ಯ 6 ಹೊರಗುತ್ತಿಗೆ ಶಿಕ್ಷಕರು, 3 ಅತಿಥಿ ಶಿಕ್ಷಕರಿದ್ದಾರೆ. 4 ಶಿಕ್ಷಕರ ಕೊರತೆಯ ಮಧ್ಯೆಯೂ ಶಿಕ್ಷಕರ ಪರಿಶ್ರಮದಿಂದಾಗಿ ಪ್ರತೀ ವರ್ಷ ಈ ಶಾಲೆ ಶೇ.100 ಫಲಿತಾಂಶ ಪಡೆಯುತ್ತಾ ಸಾಧನೆ ಮಾಡುತ್ತಿದೆ. ಮುಂದಿನ ಶೈಕ್ಷಣಿಕ ಸಾಲಿನ ದಾಖಲಾತಿ ಈಗಾಗಲೇ ಭರ್ತಿಯಾಗಿರುವುದು ಈ ಶಾಲೆಯು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ.

ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ದಾನಿಗಳ ಕೊಡುಗೆ :

ಮುತ್ತಿಗೆಪುರ ಸರಕಾರಿ ಶಾಲೆ ಆಕರ್ಷಣೆಯ ಕೇಂದ್ರವಾಗುತ್ತಿರುವುದರ ಹಿಂದೆ ಈ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಧು ಕುಮಾರ್ ಹಾಗೂ ೮ ಸದಸ್ಯರು ಮತ್ತು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯೆ ಭಾರತಿ ಮತ್ತು ಇತರ ಶಿಕ್ಷಕರ ಪರಿಶ್ರಮ ಕಾರಣವಾಗಿದೆ. ಇವರ ಪರಿಶ್ರಮದಿಂದಾಗಿ ಶಾಲೆಗೆ ಸೌದಿ ಅರೇಬಿಯಾದಲ್ಲಿರುವ ಮೂಡಿಗೆರೆ ಮೂಲದ ಉದ್ಯಮಿ ಸಿದ್ದೀಕ್ ಎಂಬವರು 60 ಸಾವಿರ ರೂ. ವೆಚ್ಚದ ಶುದ್ಧ ಕುಡಿಯುವ ನೀರಿ ಘಟಕವನ್ನು ದಾನ ನೀಡಿದ್ದರೆ, ಉದ್ಯಮಿ ಸಂತೋಷ್ 18 ಲಕ್ಷ ರೂ. ವೆಚ್ಚದಲ್ಲಿ ಪ್ರಾರ್ಥನೆ, ಸಭೆ, ಸಮಾರಂಭ ನಡೆಸಲು ಅಗತ್ಯವಾದ ಸಭಾಂಗಣವನ್ನು ನಿರ್ಮಿಸಿಕೊಟ್ಟಿದ್ದಾರೆ. ಶೆರ್ಲಿನ್ ವಿಲಿಯಮ್ಸ್ ಎಂಬ ಕಂಪೆನಿ 18 ಲಕ್ಷ ರೂ. ವೆಚ್ಚದಲ್ಲಿ ಪೀಠೋಪಕರಣಗಳನ್ನು ನೀಡಿದ್ದರೆ, ಯೂತ್ ಫಾರ್ ಸೇವಾ ಸಂಸ್ಥೆ ೮ ಗಣಕಯಂತ್ರಗಳು ಹಾಗೂ ಕಂಪ್ಯೂಟರ್ ಟೇಬಲ್‌ಗಳನ್ನು ದಾನ ಮಾಡಿದೆ. ಇದರೊಂದಿಗೆ ಶಾಲೆಯಲ್ಲಿ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಹಾಗೂ ಸ್ಪೋಕನ್ ಇಂಗ್ಲಿಷ್ ಶಿಕ್ಷಣವೂ ಸಿಗುವಂತಹ ವ್ಯವಸ್ಥೆಯನ್ನು ಎಸ್‌ಡಿಎಂಸಿ ಸದಸ್ಯರು ಮತ್ತು ಶಿಕ್ಷಕರು ಮಾಡಿದ್ದಾರೆ.

ಈ ಶಾಲೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, ಎಲ್‌ಕೆಜಿ, ಯುಕೆಜಿ ಶಿಕ್ಷಣವೂ ಬಡ ಮಕ್ಕಳಿಗೆ ಸಿಗುತ್ತಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿಗಳನ್ನೂ ನಡೆಸಲಾಗುತ್ತಿದೆ. ಶಾಲೆಯ ಆವರಣ,

ಕೊಠಡಿಗಳು ಸೇರಿ 20 ಸಿಸಿಟಿವಿ ಕ್ಯಾಮರಾ ಅಳವಡಿಸಲು ದಾನಿಗಳು ಮುಂದೆ ಬಂದಿದ್ದಾರೆ. ಮೈಕ್ ಹಾಗೂ ಸ್ಪೀಕರ್‌ಗಳ ಮೂಲಕ ಮಕ್ಕಳಿಗೆ, ಶಿಕ್ಷಕರಿಗೆ ಸಂದೇಶ, ಮಾಹಿತಿ ನೀಡುವ ವ್ಯವಸ್ಥೆ ಶಾಲೆಯಲ್ಲಿದ್ದು, ಗ್ರಾಮೀಣ ಭಾಗದ ಶಾಲಾ ಮಕ್ಕಳಿಗಾಗಿ ಸ್ಕೂಲ್ ಬಸ್‌ನ ವ್ಯವಸ್ಥೆಗೂ ದಾನಿಗಳು ನೆರವು ನೀಡಲು ಮುಂದಾಗಿದ್ದಾರೆ.

ಮುತ್ತಿಗೆಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡೀ ಜಿಲ್ಲೆಗೆ ಮಾದರಿ ಶಾಲೆಯಾಗಿ ಹೊರ ಹೊಮ್ಮುತ್ತಿದೆ. ಈ ಶಾಲೆ ಸರಕಾರಿ ಶಾಲೆಯಾಗಿದ್ದರೂ ಎಲ್ಲ ರೀತಿಯ ಸೌಲಭ್ಯ, ಗುಣಮಟ್ಟದ ಶಿಕ್ಷಣದಿಂದಾಗಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತಹ ಸಾಧನೆ ಮಾಡುತ್ತಿದೆ. ಇದಕ್ಕೆ ಕಾರಣ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ನಿಸ್ವಾರ್ಥ ಸೇವೆ ಮತ್ತು ದಾನಿಗಳ ಸಾಮಾಜಿಕ ಕಳಕಳಿ ಕಾರಣವಾಗಿದೆ. ಪ್ರತೀ ವರ್ಷ ಶಾಲೆ ಫಲಿತಾಂಶದಲ್ಲಿ ಶೇ.100 ಫಲಿತಾಂಶ ಪಡೆಯುತ್ತಿದೆ. ಮುಂದಿನ ಸಾಲಿನ ದಾಖಲಾತಿ ಈಗಾಗಲೇ ಪೂರ್ಣಗೊಂಡಿರುವುದು ಶಾಲೆಯಲ್ಲಿ ಮಕ್ಕಳಿಗೆ ಸಿಗುತ್ತಿರುವ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಕಾಫಿ ಕ್ಯೂರಿಂಗ್ ಉದ್ಯಮಿ ಸಂತೋಷ್ ಈ ಶಾಲೆಯ ಅಭಿವೃದ್ಧಿಗೆ 2 ಕೋಟಿಗೂ ಹೆಚ್ಚು ಹಣ ದಾನ ನೀಡಿದ್ದಾರೆ. ಈ ಹಣದೊಂದಿಗೆ ವಿವೇಕಾ ಯೋಜನೆಯ ಅನುದಾನದಲ್ಲಿ ಹೊಸದಾಗಿ ಸುಸಜ್ಜಿತವಾದ 12 ಕೊಠಡಿಗಳ ಕಟ್ಟಡ ನಿರ್ಮಿಸಲಾಗಿದೆ.

-ಮಧು ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ, ಮುತ್ತಿಗೆಪುರ ಸರಕಾರಿ ಶಾಲೆ

ಪ್ರಶಸ್ತಿ, ಸಾಧನೆಗಳು :

ಉತ್ತಮ ಶಾಲೆ ಪ್ರಶಸ್ತಿ, ಸ್ವಚ್ಛ ಶಾಲೆ ಪ್ರಶಸ್ತಿ, ಅಕ್ಷರ ದಾಸೋಹ ಉತ್ತಮ ನಿರ್ವಹಣೆ ಪ್ರಶಸ್ತಿ, ಉತ್ತಮ ಎಸ್‌ಡಿಎಂಸಿ ಪ್ರಶಸ್ತಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ (ರೇಣುಕಾ ಟೀಚರ್), ಹಸಿರು ಶಾಲೆ ಪ್ರಶಸ್ತಿ ಯಂತಹ ಹಲವು ಪ್ರಶಸ್ತಿಗಳನ್ನು ಈ ಶಾಲೆ ತನ್ನ ಮುಡಿಗೇರಿಸಿಕೊಂಡಿದೆ. ಕ್ರೀಡಾಕೂಟಗಳಲ್ಲೂ ಈ ಶಾಲೆಯ ಮಕ್ಕಳು ಸಾಧನೆ ಮಾಡಿದ್ದಾರೆ. ಇಬ್ಬರು ಮಕ್ಕಳು ೧೦೦ ಮೀ. ಓಟದ ಸ್ಫರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರೆ, ಶಾಲೆಯ ಹಳೆಯ ವಿದ್ಯಾರ್ಥಿನಿ ದೀಪ್ತಿ ಎಂಬವರು ರಾಷ್ಟ್ರಮಟ್ಟದಲ್ಲಿ ನಡೆದ ವಾಲಿಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ಮಹಿಳೆಯರ ತಂಡಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.

share
ಕೆ.ಎಲ್.ಶಿವು, ಚಿಕ್ಕಮಗಳೂರು
ಕೆ.ಎಲ್.ಶಿವು, ಚಿಕ್ಕಮಗಳೂರು
Next Story
X