ಮೂಡಿಗೆರೆ | ಎರಡು ಕಾರುಗಳ ನಡುವೆ ಅಪಘಾತ : ಓರ್ವ ಮೃತ್ಯು

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ, ಬಡವನ ದಿಣ್ಣೆ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಕಾರು ಎದುರು ಬರುತ್ತಿದ್ದ ಮತ್ತೊಂದು ಕಾರಿಗೆ ಮುಖಾಮುಖಿಯಾಗಿ ಢಿಕ್ಕಿ ಹೊಡೆದ ಪರಿಣಾಮ, ಎರಡೂ ವಾಹನಗಳು ಜಖಂಗೊಂಡಿವೆ.
ಅಪಘಾತದಲ್ಲಿ ಬಾಳೂರು ಹೋಬಳಿಯ ಹುಯಿಲು ಮನೆ ಮೂಲದ ಅಕ್ಷಯ್ (25) ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ವಿಕಾಸ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಯಲ್ಲಿದ್ದಾರೆ. ಉಳಿದ ಪ್ರಯಾಣಿಕರೂ ಗಾಯಗೊಂಡಿದ್ದು, ಅವರನ್ನು ಮಂಗಳೂರು, ಹಾಸನ ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.
ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಮಳೆಯಿಂದಾಗಿ ರಸ್ತೆ ಜಾರುವಿಕೆ ಹೆಚ್ಚಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
Next Story