ಮೂಡಿಗೆರೆ | ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಕಾರಿಗೆ ಢಿಕ್ಕಿ

ಮೂಡಿಗೆರೆ: ಭಾರೀ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಕಾರಿಗೆ ಢಿಕ್ಕಿ ಹೊಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ.
ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಹಾಗೂ ಇನ್ನಿತರ ಕಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಕಾರು ಚಾಲಕ ಸೇರಿ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story