ಚಿತ್ರದುರ್ಗ | ವಿದ್ಯುತ್ ಆಘಾತ: ಮೂವರು ಮೃತ್ಯು

ಚಿತ್ರದುರ್ಗ, ಜು.23: ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತಗುಲಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.
ದಾವಣಗೆರೆ ಮೂಲದ ಕಾರ್ಮಿಕರಾದ ನಝೀರ್(30), ಫಾರೂಕ್(30) ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ರೈತ ಶ್ರೀನಿವಾಸ್(35) ಮೃತಪಟ್ಟವರು.
ಶ್ರೀನಿವಾಸ್ ಅವರ ತೋಟದಲ್ಲಿ ಅಡಿಕೆ ಶೆಡ್ ನಿರ್ಮಾಣಕ್ಕೆ ಕಬ್ಬಿಣದ ಕಂಬಗಳನ್ನು ನೆಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಲ್ಲೇ ಅದು ಹೋಗಿದ್ದ ವಿದ್ಯುತ್ ತಂತಿ ಕಬ್ಬಿಣದ ಕಂಬಕ್ಕೆ ತಗುಲಿದೆ ಎಂದು ತಿಳಿದುಬಂದಿದೆ.
ವಿದ್ಯುತ್ ಆಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Next Story