ನೇಹಾ ಹಿರೇಮಠ್ ಹತ್ಯೆ ಪ್ರಕರಣ | ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಧಾರವಾಡ ಹೈಕೋರ್ಟ್

ನೇಹಾ ಹಿರೇಮಠ್/ ಹತ್ಯೆ ಆರೋಪಿ ಫಯಾಝ್
ಹುಬ್ಬಳ್ಳಿ, ಸೆ.3: ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಝ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಪೊಲೀಸರು ಬಂಧನ ಪ್ರಕ್ರಿಯೆಯನ್ನು ಸರಿಯಾಗಿ ಮಾಡಿಲ್ಲ, ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ, ಸರಿಯಾದ ಸಾಕ್ಷಿ ಆಧಾರಗಳಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಆರೋಪಿ ಪರ ವಕೀಲರು ಮನವಿ ಮಾಡಿದ್ದರು.
ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದರು.
2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿ ಫಯಾಝ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2025ರ ಆ.4ರಂದು ತಿರಸ್ಕೃತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಕೂಡ ವಜಾಗೊಳಿಸಿ ಆದೇಶ ಹೊರಡಿಸಿದೆ.
Next Story