ಹಾವೇರಿ | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಹಾವೇರಿ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ನಡೆದಿದೆ.
ಮಾಲತೇಶ ಕುರುಬರ (19), ಬಸವರಾಜ್ (38) ಮೃತರು ಎಂದು ತಿಳಿದು ಬಂದಿದೆ. ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮಾಲತೇಶನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ ಬಸವರಾಜ್ನ ಮೃತದೇಹಕ್ಕಾಗಿ ಹುಡಗಾಟ ನಡೆಸಲಾಗುತ್ತಿದೆ.
ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Next Story