ಸಾರಿಗೆ ನೌಕರರ ಮುಷ್ಕರ | ಗದಗದಲ್ಲಿ ಸಾರಿಗೆ ಬಸ್‌ಗೆ ಕಲ್ಲು ತೂರಾಟ

ಗದಗ : ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಹೊಸಪೇಟೆ ಸಂಚರಿಸುವ ಸಾರಿಗೆ ಬಸ್‌ಗೆ ಕಿಡಿಗೇಡಿಗಳು ಕಲ್ಲು ಎಸೆದ ಘಟನೆ ಗದಗ ಹುಬ್ಬಳ್ಳಿ ಬೈಪಾಸ್‌ನಲ್ಲಿ ನಡದಿದೆ.
ಸಾರಿಗೆ ನೌಕರರ ಮುಷ್ಕರ ಹಿನ್ನಲೆ, ಕೇವಲ ಬೆರಳೆಣಿಕೆಯಷ್ಟು ಬಸ್‌ಗಳು ಮಾತ್ರ ಸಂಚರಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸಾರಿಗೆ ಸಂಸ್ಥೆ ಬಸ್‌ಗೆ ಕಲ್ಲು ಹೊಡೆದಿದ್ದರಿಂದ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಮಾಸ್ಕ್ ಧರಿಸಿ ಬೈಕ್ ನಲ್ಲಿ ಬಂದ ಮುಸುಕುಧಾರಿಗಳು ಚಲಿಸುವ ಬಸ್‌ಗೆ ಕಲ್ಲು ಹೊಡೆದು ಪರಾರಿಯಾಗಿದ್ದಾರೆ.
ಬಸ್ ಸದ್ಯ ಗದಗ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಿಂತಿದೆ. ಇದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯನಗರ ಜಿಲ್ಲೆ ಹೊಸಪೇಟೆ ಡಿಪೋಗೆ ಸೇರಿದ ಬಸ್ ಆಗಿದೆ. ನಿನ್ನೆ ಹುಬ್ಬಳ್ಳಿಗೆ ಹೋಗಿತ್ತು, ಇಂದು ಮರಳಿ ಹೊಸಪೇಟೆ ಹೋಗುವ ವೇಳೆ ಈ ಘಟನೆ ನಡೆದಿದೆ.
Next Story