ʼಹೊಳೆ ಇಟಗಿ-ಬ್ಯಾಲಹುಣಸಿ ಬ್ರಿಡ್ಜ್ ನಿರ್ಮಾಣಕ್ಕೆ ಕ್ರಮʼ : ಸಂಸದ ಬೊಮ್ಮಾಯಿ ಪತ್ರಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ

ಗದಗ, ಆ. 29: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೊಳೆ ಇಟಗಿಯಿಂದ ಬ್ಯಾಲಹುಣಸಿ ಗ್ರಾಮದ ವರೆಗೆ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
ಈ ಕುರಿತು ಜುಲೈ 30ರಂದು ಸಂಸದ ಬಸವರಾಜ ಬೊಮ್ಮಾಯಿ ಪತ್ರದ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು, ಹೊಳೆ ಇಟಗಿಯಿಂದ ಬ್ಯಾಲಹುಣಸಿ ಗ್ರಾಮದ ವರೆಗೆ ಬ್ರಿಡ್ಜ್ ನಿರ್ಮಾಣ ಮಾಡುವ ಕುರಿತು ಗಮನ ಹರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Next Story