ಗದಗ | ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು

ಗದಗ : ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದು ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಗದಗನಲ್ಲಿ ನಡೆದಿದೆ.
ಗದಗ ನಗರದ ಚನ್ನಮ್ಮ ಸರ್ಕಲ್ ಬಳಿ ಬೆಳಗಿನ ಜಾವ ವೇಗವಾಗಿ ಬಂದು ಡಿವೈಡರ್ ಬಳಿಯ ಕಂಬಕ್ಕೆ ಢಿಕ್ಕಿ ಹೊಡೆದಿದ್ದಾರೆ. 25 ವರ್ಷದ ಅಮನ್ ರಿಯಾಜ್ ಮುಳಗುಂದ ಹಾಗೂ 23 ವರ್ಷದ ಜುನೇದ್ ಕಾಗದಗಾರ ಮೃತರು ಎಂದು ಗುರುತಿಸಲಾಗಿದೆ.
ಮೃತರು ಇಬ್ಬರು ಗದಗ ನಗರದ ಜವಳಗಲ್ಲಿ ನಿವಾಸಿಗಳು ಎನ್ನಲಾಗಿದ್ದು, ಮುಳಗುಂದ ನಾಕಾದಿಂದ ಚನ್ನಮ್ಮ ಸರ್ಕಲ್ ಮಾರ್ಗವಾಗಿ ಜವಳಗಲ್ಲಿ ಕಡೆ ಹೋಗುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬೈಕ್ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿ ಬಿದ್ದಿದೆ. ಅತಿಯಾದ ವೇಗವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದಾರೆ. ಗದಗ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
Next Story