ಗದಗ ಪೊಲೀಸರ ಕಾರ್ಯಾಚರಣೆ : ನಂಬರ್ ಪ್ಲೇಟ್ ಇಲ್ಲದ ಬೈಕ್ ಸೀಝ್

ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೆಟಗೇರಿ ಸಿಪಿಐ ಅವರ ನೇತೃತ್ವದಲ್ಲಿ ಗದಗ ಸಂಚಾರ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿಶೇಷ ಕಾರ್ಯಾಚರಣೆ ನಡೆಸಿ ನಂಬರ್ ಪ್ಲೇಟ್ಗಳನ್ನು ಮರೆಮಾಚಿಸಿದ ಹಾಗೂ ನಂಬರ್ ಪ್ಲೇಟ್ ಇಲ್ಲದ ಸುಮಾರು 40 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣಗಳನ್ನು ದಾಖಲಿಸಿದ್ದಾರೆ.
ವಾಹನಗಳ ನಂಬರ್ ಪ್ಲೇಟ್ಗಳನ್ನು ಮರೆಮಾಚಿ ವಾಹನಗಳನ್ನು ಓಡಿಸುವುದು ಕಾನೂನು ಬಾಹಿರ, ಅಂತಹ ವಾಹನಗಳ ವಿರುದ್ಧ ನಿರಂತರ ವಿಶೇಷ ಕಾರ್ಯಾಚರಣೆ ನಡೆಸುವ ಕಾರ್ಯಕ್ಕೆ ಗದಗ ಪೊಲೀಸರು ಮುಂದಾಗಿದ್ದಾರೆ.
ಈ ವಿಶೇಷ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಸಿಬ್ಬಂದಿರವರ ಕಾರ್ಯಕ್ಕೆ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಅಭಿನಂದಿಸಿ ಶ್ಲಾಘಿಸಿದ್ದಾರೆ.
Next Story