ಹಾವೇರಿ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 14 ತಿಂಗಳ ಮಗು ಮೃತ್ಯು

ಹಾವೇರಿ: ಮನೆಯೊಂದರ ಎದುರು ತುಂಬಿಸಿಟ್ಟಿದ್ದ ಬಕೆಟ್ ನ ನೀರಿಗೆ ಬಿದ್ದು ಅಸ್ವಸ್ಥಗೊಂಡಿದ್ದ 1 ವರ್ಷ 2 ತಿಂಗಳ ಮಗು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಶಿವಬಸವನಗರದಲ್ಲಿ ಘಟನೆ ನಡೆದಿದ್ದು, ಮನೆಯ ಮುಂಭಾಗದಲ್ಲಿ ಅ.19ರಂದು ದಕ್ಷಿತ್ ಎಂಬ ಮಗು ಆಟವಾಡುತ್ತಿತ್ತು. ಈ ವೇಳೆ ಮಗು ಮನೆಯ ಎದುರು ನೀರು ತುಂಬಿದ್ದ ಬಕೆಟ್ ಗೆ ತಲೆ ಕೆಳಗಾಗಿ ಬಿದ್ದಿತ್ತು. ಬಕೆಟ್ನಲ್ಲಿ ಮಗುವಿನ ಕಾಲು ನೋಡಿದ ಪೋಷಕರು ಹಾಗೂ ಸ್ಥಳೀಯರು, ಮಗುವನ್ನು ಮೇಲಕ್ಕೆ ಎತ್ತಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





