ಹಾವೇರಿ: ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರು ಮೃತ್ಯು, ಹಲವರಿಗೆ ಗಂಭೀರ ಗಾಯ

ಹಾವೇರಿ: ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ಸಾಂಗ್ಲಿಯಿಂದ ಕೊಯಮತ್ತೂರು ಗೆ ಹೊರಟಿದ್ದ ವೆಂಕಟೇಶ್ವರ ಟ್ರಾವೆಲ್ಸ್ ನ ಸ್ಲೀಪರ್ ಬಸ್,ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.
ಬಸ್ಸಿನಲ್ಲಿಒಟ್ಟು 36 ಮಂದಿ ಪ್ರಯಾಣಿಸುತ್ತಿದ್ದು, 13 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Next Story