ಕಲಬುರಗಿ | ಡಾ.ಫಾರುಕ್ ಮಣ್ಣೂರಗೆ ಅಂತರರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ: ನಗರದ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಫಾರುಕ್ ಮಣ್ಣೂರ ಅವರಿಗೆ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ʼವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಲಂಡನ್ʼ ವತಿಯಿಂದ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಲಂಡನ್‌ನ ಬ್ರಿಟಿಷ್ ಸಂಸತ್ತಿನ ಹೌಸ್ ಆಫ್ ಕಾಮನ್ಸ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುಕೆ ಸಂಸತ್ ಸದಸ್ಯ ಲಾರ್ಡ್ ರಾಮಿ ರೇಂಜರ್ ಅವರಿಂದ ಡಾ.ಮಣ್ಣೂರ ಪ್ರಶಸ್ತಿ ಸ್ವೀಕರಿಸಿದರು. ಕಲ್ಯಾಣ ಕರ್ನಾಟಕ ಭಾಗದಿಂದ ಈ ಗೌರವ ಪಡೆದಿರುವ ಮೊದಲ ವೈದ್ಯರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಲಂಡನ್‌ನ ಬ್ರಿಟಿಷ್ ಸಂಸತ್ತಿನಲ್ಲಿ ಪ್ರಶಸ್ತಿ ಸ್ವೀಕರಿಸಿದ್ದು, ನನ್ನ ಜೀವನದ ಹೆಮ್ಮೆಯ ಕ್ಷಣ. ಇದಕ್ಕೆ ಪ್ರಮುಖ ಕಾರಣ ಕಲ್ಯಾಣ ಕರ್ನಾಟಕ ಭಾಗದ ಜನರ ಪ್ರೀತಿ ಮತ್ತು ವಿಶ್ವಾಸ. ಆದ್ದರಿಂದ ಈ ಪ್ರಶಸ್ತಿಯನ್ನು ನಾನು ನಮ್ಮ ಭಾಗದ ಜನತೆಗೆ ಅರ್ಪಿಸುತ್ತೇನೆ.
-ಡಾ. ಫಾರುಕ್ ಮಣ್ಣೂರ, ಮುಖ್ಯಸ್ಥರು, ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ, ಕಲಬುರಗಿ