ಕಲಬುರಗಿ | ಬೈಕ್ಗೆ ಲಾರಿ ಢಿಕ್ಕಿ; ಓರ್ವ ಮೃತ್ಯು

ಕಲಬುರಗಿ: ಬೈಕ್ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹ ಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹೈಕೋರ್ಟ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಉದನೂರು ಗ್ರಾಮದ ಬಲಭೀಮ ಬಿರಾದರ್(62) ಮೃತರು. ಬಿರಾದರ್ ಅವರು ಸ್ಥಳೀಯ ಯುವಕನೋರ್ವನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ಬೈಕ್ಗೆ ಲಾರಿ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಲಭೀಮ ಬಿರಾದರ್ ಲಾರಿಯ ಚಕ್ರದಡಿ ಬಿದ್ದು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆ 1ರಲ್ಲಿ ಪ್ರಕರಣ ದಾಖಲಾಗಿದೆ.
Next Story