ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಮೇಲ್ವಿಚಾರಣೆ ಮಾಡಲು ಪ್ರತ್ಯೇಕ ಕಲ್ಯಾಣ ಕರ್ನಾಟಕ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ತಮ್ಮ "ಎಕ್ಸ್" ಖಾತೆಯಲ್ಲಿ ಬರೆದುಕೊಂಡಿರುವ ಅವರು, ಹೊಸ ಸಚಿವಾಲಯದಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಗತಿ ಪಡೆಯಲಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸಿ ಬಲಪಡಿಸುವ ನಿರ್ಧಾರವನ್ನೂ ಸಚಿವ ಸಂಪುಟ ಕೈಗೊಂಡಿದೆ.
ಹೊಸ ಸಚಿವಾಲಯ ಸೃಷ್ಟಿಗೆ ಕಾರಣರಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪ್ರಿಯಾಂಕ್ ಖರ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Next Story