ಕಾಸರಗೋಡು: ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದ ಪತಿ ಆತ್ಮಹತ್ಯೆ

ಕಾಸರಗೋಡು: ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಿಕೋಲ್ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕುತ್ತಿಕೋಲ್ ಪಯದಂಗನದ ಆಟೋ ರಿಕ್ಷಾ ಚಾಲಕ ಸುರೇಶ್ (45) ಆತ್ಮಹತ್ಯೆ ಮಾಡಿಕೊಂಡವರು. ಇರಿತಕ್ಕೊಳಗಾಗಿ ಪತಿಯಿಂದ ತಪ್ಪಿಸಿದ ಮಹಿಳೆ ನೆರೆಮನೆಗೆ ತೆರಳಿ ಮಾಹಿತಿ ನೀಡಿದ್ದು, ನೆರೆಮನೆಯವರು ಮನೆಗೆ ಬಂದು ಪರಿಶೀಲಿಸಿದಾಗ ಸುರೇಶ್ ಮನೆಯೊಳಗೆ ನೇಣು ಬಿಗಿದು ಮೃತಪಟ್ಟಿರುವುದು ಪತ್ತೆಯಾಗಿದೆ.
ಗಾಯಗೊಂಡಿರುವ ಮಹಿಳೆ ಸಿನಿ ಎಂಬವರನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
Next Story