Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು | ಬಾಲಕನಿಗೆ ಲೈಂಗಿಕ...

ಕಾಸರಗೋಡು | ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ ಪಿಎಫ್ ಅಧಿಕಾರಿ ಸಹಿತ 9 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Sept 2025 9:39 AM IST
share
ಕಾಸರಗೋಡು | ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ ಪಿಎಫ್ ಅಧಿಕಾರಿ ಸಹಿತ 9 ಮಂದಿಯ ಬಂಧನ

ಕಾಸರಗೋಡು: ಕಾಸರಗೋಡಿನಲ್ಲಿ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಹಾಯಕ ಶಿಕ್ಷಣಾಧಿಕಾರಿ(AEO), ರೈಲ್ವೆ ರಕ್ಷಣಾ ಪಡೆ (RPF) ಅಧಿಕಾರಿ ಸೇರಿದಂತೆ ಒಂಭತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಒಟ್ಟು 16 ಪ್ರಕರಣಗಳಲ್ಲಿ 16 ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಚಂದೇರಾ ಪೊಲೀಸರು ತಿಳಿಸಿದ್ದಾರೆ.

ಬೇಕಲ ಶೈಕ್ಷಣಿಕ ಉಪ ಜಿಲ್ಲೆಯ ಸಹಾಯಕ ಶಿಕ್ಷಣಾಧಿಕಾರಿ ಝೈನುದ್ದೀನ್ ವಿ.ಕೆ. (52), ಚಿತ್ರರಾಜ್ ಎರವಿಲ್ (48), ಆರ್ ಪಿಎಫ್ ಅಧಿಕಾರಿ ಅಬ್ದುಲ್ ರಹ್ಮಾನ್ ಹಾಜಿ (55), ತ್ರಿಕ್ಕರಿಪುರದ ವಳವಕ್ಕಾಡ್ ನಿವಾಸಿ ಪಿಲಿಕೋಡ್ ಪಂಚಾಯತ್ ವ್ಯಾಪ್ತಿಯ ವೆಳ್ಳಕ್ಕಲ್ ನ ಸುಕೇಶ್ (30), ಚಂದೇರದ ಅಫ್ಝಲ್ (23), ಚೀಮೇನಿಯ ಶಿಜಿತ್ (36), ತ್ರಿಕ್ಕರಿಪುರ ಸಮೀಪದ ವಡಕರ ಕೋವಲ್ನ ರಯೀಸ್ (30), ಕಾಞಂಗಾಡ್ನ ಪಡನ್ನಕ್ಕಾಡ್ನ ರಂಝಾನ್ (64) ಮತ್ತು ಚೀಮೇನಿಯ ನಾರಾಯಣನ್ (60) ಬಂಧಿತ ಆರೋಪಿಗಳು.

ಈ ನಡುವೆ ಸಾಮಾನ್ಯ ಶಿಕ್ಷಣ ಇಲಾಖೆಯು ಝೈನುದ್ದೀನ್ ನನ್ನು ಸೇವೆಯಿಂದ ಅಮಾನತು ಮಾಡಿದೆ.

ಯೂತ್ ಲೀಗ್ ತ್ರಿಕ್ಕರಿಪುರ ಪಂಚಾಯತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ವಡಕ್ಕುಂಪಡ್ (46) ಸೇರಿದಂತೆ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

"ಒಟ್ಟು 16 ಪ್ರಕರಣಗಳಲ್ಲಿ 10 ಪ್ರಕರಣಗಳು ಚಂದೇರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಉಳಿದ ಆರು ಪ್ರಕರಣಗಳು ಕಣ್ಣೂರಿನ ಪಯ್ಯನೂರು ಠಾಣೆ, ಕೋಝಿಕ್ಕೋಡ್ನ ಕಸಬಾ ಠಾಣೆ ಮತ್ತು ಎರ್ನಾಕುಲಂನ ಎಲಮಕ್ಕರ ಠಾಣೆಯಲ್ಲಿ ದಾಖಲಾಗಿವೆ" ಎಂದು ಕಾಸರಗೋಡು ಎಸ್ಪಿ ವಿ.ವಿ.ವಿಜಯ ರೆಡ್ಡಿ ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿಗಳು ಬಾಲಕನನ್ನು ಫೋನ್ ಮೂಲಕ ಸಂಪರ್ಕಿಸಿ ಭೇಟಿ ನೀಡುತ್ತಿರುವುದನ್ನು ಅವನ ತಾಯಿ ಗಮನಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪೊಲೀಸರನ್ನು ಸಂಪರ್ಕಿಸಿದರು, ಅವರು ಚೈಲ್ಡ್ಲೈನ್ಗೆ ಮಾಹಿತಿ ನೀಡಿದರು. ಇದರ ನಂತರ, ಚೈಲ್ಡ್ ಲೈನ್ ಅಧಿಕಾರಿಗಳು ಬಾಲಕನನ್ನು ಕೌನ್ಸೆಲಿಂಗ್ ಗೆ ಒಳಪಡಿಸಿದಾಗ ಆತ ಎದುರಿಸಿದ ದೌರ್ಜನ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 377 ಮತ್ತು ಪೊಕ್ಸೊ ಕಾಯ್ದೆಯ ಸೆಕ್ಷನ್ 3, 4, 5, 6, 7 ಮತ್ತು 8 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X