ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು, ಓರ್ವ ಗಂಭೀರ

ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಇಂದು ಸಂಜೆ ನಡೆದಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಮೃತಪಟ್ಟ ಮಕ್ಕಳು.
ಅನ್ವರ್ ನ ಸಹೋದರ ಹಾಶಿಮ್ ನನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಮಾಣಿಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ನಾಗರಿಕರು, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ಮಕ್ಕಳನ್ನು ಹೊರ ತೆಗೆದರೂ ಇಬ್ಬರು ಮೃತಪಟ್ಟಿದ್ದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
Next Story