ಕೋಲಾರ | ಆಹಾರ ಸೇವಿಸಿದ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು

ಸಾಂದರ್ಭಿಕ ಚಿತ್ರ | PC : freepik
ಕೋಲಾರ, ಆ.13 : ನಗರದ ಹೊರವಲಯದ ಬಸವನತ್ತ ಬಳಿ ಇರುವ ವಿದ್ಯಾಜ್ಯೋತಿ ಕಾಲೇಜಿನ ಹಾಸ್ಟೆಲ್ನ ಸುಮಾರು 41 ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಮಂಗಳವಾರ ರಾತ್ರಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು ಈರುಳ್ಳಿ ದೋಸೆ, ಚಟ್ಟಿ ಹಾಗೂ ಆಲೂಗಡ್ಡೆ ಸಾಗು ಸೇವಿಸಿದ್ದರು ಎನ್ನಲಾಗಿದೆ. ಬುಧವಾರ ಬೆಳಗ್ಗೆ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡು ವಾಂತಿ ಹಾಗೂ ಭೇದಿಯಾಗಿದೆ.
ತಕ್ಷಣವೇ ಎಲ್ಲರನ್ನೂ ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದರು. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.
ಹಾಸ್ಟೆಲ್ನಲ್ಲಿ ಆಹಾರ ತಯಾರಿಕೆ ಮತ್ತು ಸಂಗ್ರಹಣೆಯ ಪ್ರಕ್ರಿಯೆಯ ಕುರಿತು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದರು. ಬಳಿಕ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದರು.
ತಹಶೀಲ್ದಾರ್ ಡಾ.ನಯನಾ ಹಾಗೂ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಜಗದೀಶ್ ಆಸ್ಪತ್ರೆಯ ವಾಡ್ ೯ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ಮುಂದಿನ ಕ್ರಮವಹಿಸಿದ್ದಾರೆ.