ಕೋಲಾರ | ಕಾಂಗ್ರೆಸ್ ಹಿರಿಯ ಮುಖಂಡ ಮುಹಮ್ಮದ್ ಇಕ್ಬಾಲ್ ನಿಧನ

ಕೋಲಾರ : ಕೋಲಾರ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷರಾದ ಮುಹಮ್ಮದ್ ಇಕ್ಬಾಲ್ ನಿಧನರಾಗಿದ್ದಾರೆ.
ಸುಮಾರು 40ಕ್ಕೂ ಹೆಚ್ಚು ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮನ್ನು ತೊಡಿಗಿಸಿಕೊಂಡು ಹಲವಾರು ರೀತಿಯ ಸಮಾಜ ಸೇವೆಯನ್ನು ಮಾಡಿದ್ದಾರೆ. ನಾಲ್ಕು ಬಾರಿ ಕೋಲಾರ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಮುಹಮ್ಮದ್ ಇಕ್ಬಾಲ್ ನಿಧನಕ್ಕೆ ಹಲವಾರು ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಮುಹಮ್ಮದ್ ಇಕ್ಬಾಲ್ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸ್ವಾಂತನ ಹೇಳಿದರು.
ಈ ಸಂದರ್ಭದಲ್ಲಿ ಕೋಲಾರ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್, ಕೆ.ಜಯದೇವ, ಹಿರಿಯ ವಕೀಲರಾದ ಮಹಮ್ಮದ್ ಹನೀಫ್ ಸೇರಿದಂತೆ ಹಲವರು ಇದ್ದರು.
Next Story