Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಸಮೀಕ್ಷೆಯಿಂದ ಯಾರು ಬಿಟ್ಟು...

ಕೊಪ್ಪಳ | ಸಮೀಕ್ಷೆಯಿಂದ ಯಾರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು: ಡಿಸಿ ಸುರೇಶ ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ12 Sept 2025 6:37 PM IST
share
ಕೊಪ್ಪಳ |  ಸಮೀಕ್ಷೆಯಿಂದ ಯಾರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು: ಡಿಸಿ ಸುರೇಶ ಇಟ್ನಾಳ

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಸೆ.22 ರಿಂದ ಅ.7 ರವರೆಗೆ ನಡೆಯಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆಯಲ್ಲಿ ಯಾರು ಕೂಡ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ-2025ರ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ತಾವು ಮಾಡುವ ಕೆಲಸ ಬಹಳ ಜವಾಬ್ದಾರಿಯಿಂದ ಇರುವುದರಿಂದ ಯಾವುದೇ ಮನೆಗಳು ಸಮೀಕ್ಷೆಯಲ್ಲಿ ಬಿಟ್ಟು ಹೋಗದಂತೆ ಎಚ್ಚರವಹಿಸಬೇಕು. ಸಮೀಕ್ಷೆಯಲ್ಲಿರುವ ಎಲ್ಲಾ ಪ್ರಶ್ನೆಗಳ ಬಗ್ಗೆ ಮೊದಲು ತಾವು ತಿಳಿದುಕೊಂಡು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗಳಿದ್ದರೆ ರಾಜ್ಯ ಮಟ್ಟದ ಮಾಸ್ಟರ್ ಟ್ರೇನರ್‌ಗಳಿಂದ ಕೇಳಿ ತಿಳಿದಿಕೊಳ್ಳಬೇಕು. ಗಣತಿದಾರರು ಪ್ರತಿ ಮನೆಗಳ ಸಮೀಕ್ಷೆಗೆ ಹೋದಾಗ ತಮಗೆ ನೀಡಿದ ನೇಮಕಾತಿ ಆದೇಶ ಪ್ರತಿ ಮತ್ತು ಐಡಿ ಕಾರ್ಡ್‌ಗಳನ್ನು ಕಡ್ಡಾಯವಾಗಿ ಧರಿಸಿಕೊಂಡು ಹೋಗಬೇಕು. ಸಮಗ್ರ ಮಾಹಿತಿ ಇರುವವರಿಂದ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಬೇಕು. ಮನೆಯಲ್ಲಿ ಯಾರು ಇಲ್ಲದಿದ್ದರೆ ಮತ್ತೊಮ್ಮೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಮೀಕ್ಷೆ ಕಾರ್ಯಕ್ಕೆ ಕೊಪ್ಪಳ ಜಿಲ್ಲೆಯಲ್ಲಿ 2685 ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. 150 ಮನೆಗಳಿಗೆ ಒಬ್ಬ ಗಣತಿದಾರರು ಇರಲಿದ್ದಾರೆ. ಜಿಲ್ಲೆಯಲ್ಲಿ ಅಂದಾಜು 3 ಲಕ್ಷ 55 ಸಾವಿರ ಮನೆಗಳಿದ್ದು, ಈ ಎಲ್ಲಾ ಮನೆಗಳಿಗೆ ಈಗಾಗಲೇ ಜೆಸ್ಕಾಂನವರು ಶೇ. 85 ಪ್ರತಿಶತ ಜಿಯೊ ಟ್ಯಾಗ್ ಮಾಡಿದ್ದಾರೆ ಇದನ್ನು ಮಾಡದ ಮನೆಗಳಿಗೆ ಚೀಟಿಗಳನ್ನು ಅಂಟಿಸಲಾಗಿದೆ ಎಂದರು.

ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ಹೇಳಿದಂತೆ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ನೀಡುವುದಾಗಿದೆ. ಅಸಮಾನತೆ, ಲಿಂಗ ತಾರತಮ್ಯ, ವರ್ಗ, ಧರ್ಮ, ಜಾತಿ ಆಧಾರಿತ ಅಸಮಾನತೆ ಹೋಗಲಾಡಿಸಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿ ಸಮ ಸಮಾಜ ನಿರ್ಮಾಣ ಮಾಡುವುದಾಗಿದೆ. ಪ್ರತಿ 10 ವರ್ಷಕ್ಕೆ ಸರಕಾರ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಅಧ್ಯಯನ ಮಾಡುತ್ತದೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ಮಾಸ್ಟರ್ ತರಬೇತಿದಾರರು ಈ ತರಬೇತಿ ಕಾರ್ಯಾಗಾರದಲ್ಲಿ ಹೇಳಿದ್ದನ್ನು ಸರಿಯಾಗಿ ತಿಳಿದುಕೊಂಡು ಮನೆ-ಮನೆಗೆ ಭೇಟಿ ನೀಡುವ ಗಣತಿದಾರರಿಗೆ ತಾವು ಚೆನ್ನಾಗಿ ತಿಳಿಸಬೇಕು. ಯಾವುದೇ ಸಮಸ್ಯೆಗಳಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಗಣತಿದಾರರು ತಮ್ಮ ಮನೆಗಳ ಸಮೀಕ್ಷೆಗೆ ಬಂದಾಗ ಜಿಲ್ಲೆಯ ಸಾರ್ವಜನಿಕರು ಅವರಿಗೆ ಸರಿಯಾದ ಮಾಹಿತಿ ನೀಡಿ ಸಹಕರಿಸಬೇಕೆಂದು ಹೇಳಿದರು.

ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ತರಬೇತಿದಾರರಾದ ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಜ್ಮಿರ್ ಅಲಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರ್ ಅವರು ತರಬೇತಿ ಕಾರ್ಯಾಗಾರದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನಾಗಮಣಿ ಹೊಸಮನಿ, ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕ ಸುರೇಶ ಜಿ. ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮಾಸ್ಟರ್‌ ಟ್ರೈನರ್‌ಗಳು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X