Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕ ಬಳ್ಳಾಪುರ
  4. 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್...

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Nov 2025 6:45 PM IST
share
2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿಸಿಎಂ ಡಿ.ಕೆ. ಶಿವಕುಮಾರ್

ಶಿಡ್ಲಘಟ್ಟ: “ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

“ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣ” ಎಂದು ಹೇಳಿದರು.

“ರಾಜ್ಯದ ಪ್ರತಿ ಮಹಿಳೆಯರು ಅವರ ಖಾತೆಗೆ ಹಣ ಬಂದಾಗಲೆಲ್ಲಾ ನಮ್ಮ ಸರಕಾರವನ್ನು ನೆನಪಿಸಿಕೊಳ್ಳುತ್ತಾರೆ. ಯಾವುದೇ ಪುಣ್ಯ ಕ್ಷೇತ್ರಗಳಿಗೆ ಹೋದರೂ ನಮ್ಮ ಒಳಿತಿಗೆ ಪ್ರಾರ್ಥನೆ ಮಾಡುತ್ತಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಬಂದಾಗ ಮಹಿಳೆಯರು ಗೌರವದಿಂದ ಅವರಿಗೆ ನಮಿಸಿದರು. ಮಹಿಳೆಯರ ಬದುಕಿನಲ್ಲಿ ನಾವು ತಂದಿರುವ ಬದಲಾವಣೆಯನ್ನು ಇಡೀ ದೇಶವೇ ನೋಡುತ್ತಿದೆ” ಎಂದರು.

“ಸತ್ಯಕ್ಕೂ ಸುಳ್ಳಿಗೂ ಎಷ್ಟು ಅಂತರ ಎಂದು ಅಕ್ಬರ್ ಒಮ್ಮೆ ಬೀರ್ಬಲ್ ಅವರನ್ನು ಕೇಳುತ್ತಾನೆ. ಆಗ ಬೀರ್ಬಲ್ ನಾಲ್ಕು ಬೆರಳಿನ ಅಂತರ ಎಂದು ಹೇಳುತ್ತಾರೆ. ಕಣ್ಣಲ್ಲಿ ನೋಡುವುದು ಸತ್ಯ, ಕಿವಿಯಲ್ಲಿ ಕೇಳುವುದು ಸುಳ್ಳು. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರ 2 ಸಾವಿರ ಕೋಟಿ ಮೊತ್ತವನ್ನು ನೀಡಿದೆ. ಇದಕ್ಕೆ ನಿಮ್ಮೆಲ್ಲರ ಕಣ್ಣುಗಳೇ ಸಾಕ್ಷಿ” ಎಂದು ಹೇಳಿದರು.

2027 ಕ್ಕೆ ಜಿಲ್ಲೆಗೆ ಎತ್ತಿನಹೊಳೆ ನೀರು :

“ಸಚಿವರಾದ ಕೆ.ಎಚ್.ಮುನಿಯಪ್ಪ ಅವರು, ಸುಧಾಕರ್ ಅವರು ಹಾಗೂ ಕೃಷ್ಣಬೈರೇಗೌಡರು ನನ್ನ ಬೆನ್ನತ್ತಿದ್ದು 2027 ರ ಹೊತ್ತಿಗೆ ಎರಡು ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ನಾವು ಪರ್ಯಾಯವಾಗಿ ಕಂದಾಯ ಭೂಮಿ ನೀಡಿದ್ದರೂ ಕೇಂದ್ರ ಪರಿಸರ ಇಲಾಖೆ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡುತ್ತಿಲ್ಲ” ಎಂದರು.

“ಕೆ. ಸಿ ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 143 ಕೆರೆ ತುಂಬಿಸಲಾಗಿದೆ. 2ನೇ ಹಂತದಲ್ಲಿ 272 ಕೆರೆ ಭರ್ತಿ ಮಾಡುತ್ತಿದ್ದೇವೆ. ಈ ಯೋಜನೆಯನ್ನು ವಿಶ್ವಬ್ಯಾಂಕ್ ಕೂಡ ಹೊಗಳಿದೆ. ಎಚ್. ಎನ್. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 65 ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಬೆಂಗಳೂರಲ್ಲಿ ಕೆರೆಗಳ ಇಂಟರ್ ಲಿಂಕ್ ಮಾಡೋಕೆ ಅಂತ 1700 ಕೋಟಿ ರೂಪಾಯಿ ಮೊತ್ತದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನೆಲಮಂಗಲದಲ್ಲಿ ವೃಷಭಾವತಿಯಿಂದ 70 ಕೆರೆ ತುಂಬಿಸಲಾಗುತ್ತಿದೆ” ಎಂದರು.

ಕೆರೆಗಳಿಗೆ ನೀರು ನಮ್ಮ ಆರನೇ ಗ್ಯಾರಂಟಿ :

“ಕೆರೆಗಳನ್ನು ತುಂಬಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ. ವ್ಯವಸಾಯಕ್ಕೆ ಹಾಗೂ ಕುಡಿಯುವುದಕ್ಕೆ ನೀರನ್ನು ನೀಡುವುದೇ ನಮ್ಮ ಉದ್ದೇಶ. ಏಳನೇ ಗ್ಯಾರಂಟಿಯಾಗಿ 1,11,11,111 ಜನರಿಗೆ ಖಾತೆಗಳನ್ನು ನೀಡಿ ಭೂಮಿ ಗ್ಯಾರಂಟಿ ನೀಡಿದ್ದೇವೆ. ಹತ್ತು ಕಿಲೋ ಅಕ್ಕಿ ನೀಡುತ್ತಿದ್ದೆವು. ಆದರೆ ಐದು ಕಿಲೋ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದ ಕಾರಣಕ್ಕೆ ಅಡುಗೆ ಎಣ್ಣೆ, ಬೇಳೆಕಾಳುಗಳ ಕಿಟ್ ನೀಡುವ ಆಲೋಚನೆ ಮಾಡಿದ್ದೇವೆ. ಶೀಘ್ರದಲ್ಲೆ ಎಲ್ಲರಿಗೂ ಈ ಯೋಜನೆ ತಲುಪಲಿದೆ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X