Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಚಿತ್ರರಂಗ ಸಮಾಜಮುಖಿ ಕೆಲಸ ಮಾಡುತ್ತಿರುವ...

ಚಿತ್ರರಂಗ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ : ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ13 Sept 2025 11:49 PM IST
share
ಚಿತ್ರರಂಗ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ : ಎಚ್.ಸಿ.ಮಹದೇವಪ್ಪ
ದಸರಾ ಚಲನಚಿತ್ರೋತ್ಸವ-2025 ಉದ್ಘಾಟನೆ

ಮೈಸೂರು, ಸೆ.13: ಭಾರತದ ಜನರ ಜೀವನದ ಮೇಲೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಶಕ್ತಿಗಳನ್ನು ಸೇರಿಸುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ ಎಂದರೆ ಅದು ಚಲನಚಿತ್ರ ಕ್ಷೇತ್ರ. ತಮ್ಮ ರಚನೆ, ಸಂಗೀತ, ಸಾಹಿತ್ಯದ ಮೂಲಕ ಸಮಾಜದಲ್ಲಿ ಹೆಚ್ಚು ಜನಪ್ರಿಯತೆಯನ್ನು ಚಲನಚಿತ್ರ ಕ್ಷೇತ್ರ ಗಳಿಸುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಮಾಲ್ ಆಫ್ ಮೈಸೂರಿನ ನೆಲಮಹಡಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ದಸರಾ ಚಲನಚಿತ್ರೋತ್ಸವ -2025 ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರೋಜಾ ದೇವಿ ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಹೆಸರು ಮಾಡಿ ಸಾಧನೆ ಮಾಡಿದ್ದಾರೆ. ಕನ್ನಡ, ತೆಲುಗು, ಹಿಂದಿ ಚಿತ್ರಗಳಲ್ಲಿ ತನ್ನದೇ ಆದಂತಹ ಗಂಭೀರತೆ ಮೂಲಕ ಜನರ ಮನಸನ್ನು ಗೆದ್ದಿದ್ದಾರೆ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ ಹಾಗೂ ಡಾ.ವಿಷ್ಣುವರ್ಧನ್ ಅವರಿಗೂ ನೀಡಲು ತೀರ್ಮಾನಿಸಲಾಗಿದೆ. ಸಮಾಜದಲ್ಲಿ ನಡವಳಿಕೆಯ ಮೇಲೆ ಸಾಧಕರನ್ನು ಜೀವಂತವಾಗಿ ಇಡುವಂತೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ದಸರಾ ಹಬ್ಬಕ್ಕೆ ಕೊಟ್ಟಿರುವಂತಹ ಕೊಡುಗೆ ಅಪಾರ ಮಹತ್ವವಾದದ್ದು. ಅದರಂತೇ ನಾವೆಲ್ಲರೂ ಒಂದಾಗಿ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ನೀಡುವುದರ ಮೂಲಕ ಈ ಚಲನಚಿತ್ರವನ್ನು ಉದ್ಘಾಟನೆ ಮಾಡಿದ್ದೇನೆ. ಇಲ್ಲಿ 84 ಸಿನೆಮಾಗಳ ಪ್ರದರ್ಶನ ಮಾಡಲಾಗುತ್ತಿದ್ದು, ಪ್ರೇಕ್ಷಕರು ಪ್ರತಿ ಚಿತ್ರವನ್ನು ವೀಕ್ಷಣೆ ಮಾಡಬೇಕು. ಎಲ್ಲರೂ ಮೈಸೂರು ಪ್ರಾಂತ್ಯವನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡೋಣ ಎಂದರು.

ಸು ಫ್ರಂ ಸೋ ಖ್ಯಾತಿಯ ಚಲನಚಿತ್ರ ನಟಿಯಾದ ಸಂಧ್ಯಾ ಅರಕೆರೆ ಮಾತನಾಡಿ, ನಾನು ಮೈಸೂರಿನವಳಾಗಿರುವುದು ನನಗೆ ತುಂಬಾ ಸಂತೋಷವಾಗಿದೆ. ಪ್ರತಿ ಬಾರಿ ನಾನು ಮೈಸೂರಿನವಳಾಗಿ ದಸರಾ ವೀಕ್ಷಣೆ ಮಾಡುತ್ತಿದ್ದೆ. ಆದರೆ ಈಗ ಸಿನಿಮಾರಂಗದಿಂದ ಬಂದು ಈ ದಸರಾದಲ್ಲಿ ಭಾಗಿಯಾಗಿರುವುದು ನನಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ಹೇಳಿದರು.

ಖ್ಯಾತ ಹಿನ್ನೆಲೆ ಗಾಯಕ ಜಸ್ಕರನ್ ಸಿಂಗ್ ಹಾಡು ಹೇಳುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಸಿನೆಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿವಿಧ ಕಲಾವಿದರು ನಿರ್ದೇಶಕರಿಗೆ ಸನ್ಮಾನ ಮಾಡಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಚಲನಚಿತ್ರೋತ್ಸವ ಸಮಿತಿಯ ಕಾರ್ಯದರ್ಶಿ ಟಿ.ಕೆ.ಹರೀಶ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರ ನಾಥ್, ಶಾಸಕರಾದ ತನ್ವೀರ್ ಸೇಠ್ , ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಚಲನಚಿತ್ರೋತ್ಸವ ಉಪ ಸಮಿತಿ ಉಪವಿಶೇಷಾಧಿಕಾರಿ ವಿಜಯ್ ಕುಮಾರ್, ಕಾರ್ಯಾಧ್ಯಕ್ಷೆ ಕೆ.ಶೋಭಾ. ನಟಿ ಅಂಜಲಿ, ಸಂಗೀತ ನಿರ್ದೇಶಕ ನಾಗಾರ್ಜುನ ಶರ್ಮಾ, ನೃತ್ಯ ನಿರ್ದೇಶಕ ಮುರುಗ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X