ಭುಗತಗಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅತ್ಯಂತ ಸಂತೋಷದಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶನಿವಾರ ತಾಲೂಕಿನ ಭುಗತಹಳ್ಳಿ ಗ್ರಾಮದ ದಲಿತ ಕಾಲನಿಯಲ್ಲಿ ನಿರ್ಮಿಸಿರುವ 7 ಅಡಿ ಎತ್ತರದ ಸಂವಿಧಾನ ಕೈಯಲ್ಲಿ ಹಿಡಿದಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣ ಮಾಡಿದ ಬಳಿಕ ಜೈ ಭೀಮ್ ಘೋಷಣೆ ಕೂಗಿ ಅವರು ಮಾತನಾಡಿದರು.
ರಾಕೇಶ್ ಸಿದ್ದರಾಮಯ್ಯ ಸ್ಮರಣೆ: ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರ ಸ್ಮರಣೆ ನಡೆಯಿತು. ಮುಖ್ಯಮಂತ್ರಿಯವರು ವೇದಿಕೆಯಲ್ಲಿದ್ದ ವೇಳೆ ನೆರೆದಿದ್ದ ಗ್ರಾಮದ ಮುಖಂಡರು, ಗ್ರಾಮದ ಜನತೆ ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ರಾಕೇಶ್ ಸಿದ್ದರಾಮಯ್ಯ ಗ್ರಾಮಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಮೂಲಕ ರಾಕೇಶ್ ಅವರ ಪುತ್ರ ಧವನ್ ಸಿದ್ದರಾಮಯ್ಯ ಅವರು ಶಾಸಕರಾಗಿ ಚುನಾಯಿತರಾಗಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಗ್ರಾಮದ ಮುಖಂಡ, ದಲಿತ ಸಂಘರ್ಷ ಸಮಿತಿಯ ಕೆ.ಮಣಿಯಯ್ಯ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಲ್ಯಾಣ ಸಿರಿ ಬಂತೇಜಿ, ಗಾಂಧಿ ನಗರದ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಶಿವಕುವಾರ್, ಡಾ.ಡಿ.ತಿಮ್ಮಯ್ಯ, ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಮಾಜಿ ಮಹಾಪೌರ ಪುರುಷೋತ್ತಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಮಹದೇವಣ್ಣ, ವಕೀಲ ಜಗದೀಶ್, ಶಿವಪ್ರಸಾದ್ ಹಾಜರಿದ್ದರು.