Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್,...

ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ14 Sept 2025 5:45 PM IST
share
ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ ಮಾಡಿದ ಸಚಿವ ಎಚ್.ಸಿ.ಮಹದೇವಪ್ಪ
ಸೆ.28, 29 ಮತ್ತು ಅ.1, 2ರಂದು ಡ್ರೋನ್ ಪ್ರದರ್ಶನ

ಮೈಸೂರು, ಸೆ.14 : ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು.

ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ವತಿಯಿಂದ ನಡೆಸಲಾಗುವ ದಸರಾ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿ, ಟೀಸರ್ ಅನಾವರಣಗೊಳಿಸಿದರು.

ಎಂದಿನಂತೆ ಈ ಬಾರಿಯೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ. ಅವುಗಳೊಂದಿಗೆ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಆಕರ್ಷಕ ಪ್ರತಿಕೃತಿಗಳನ್ನು ಇರಿಸಲಾಗುತ್ತದೆ.

ಆಕರ್ಷಕ ಡ್ರೋನ್ ಶೋ:

ದಸರಾ ಮಹೋತ್ಸವದ ಸಂಭ್ರಮಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಡ್ರೋನ್ ಪ್ರದರ್ಶನ ಈ ಬಾರಿ ಮತ್ತಷ್ಟು ಆಕರ್ಷಣೀಯವಾಗಿರಲಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29 ಮತ್ತು ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದೆ. ಕಳೆದ ಬಾರಿ 1500 ಡ್ರೋನ್ ಬಳಸಿಕೊಂಡು ನಡೆಸಲಾಗಿದ್ದ ಡ್ರೋನ್ ಪ್ರದರ್ಶನದಲ್ಲಿ ಈ ಬಾರಿ 3000 ಸಾವಿರ ಡ್ರೋನ್ ಬಳಸಿಕೊಂಡು ನಡೆಸಲಾಗುತ್ತಿದೆ.

ಅಗತ್ಯ ಸುರಕ್ಷತಾ ಕ್ರಮಗಳು:

ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸುವುದು, ಮಳೆ ಸಂದರ್ಭದಲ್ಲಿ ವಿದ್ಯುತ್‌/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸುವುದು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ ಹಾಗೂ ವಿದ್ಯುತ್‌ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24x7 ಸಹಾಯವಾಣಿ 1912 ಸಂಪರ್ಕಿಸುವಂತೆ ಕೋರಲಾಗಿದೆ.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ಜಿಪಂ ಸಿಇಒ ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X