Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಗುವಿನ ಜೀವ ರಕ್ಷಕ ಸ್ತನ್ಯಪಾನ

ಮಗುವಿನ ಜೀವ ರಕ್ಷಕ ಸ್ತನ್ಯಪಾನ

ವಿಶ್ವ ಸ್ತನ್ಯಪಾನ ಸಪ್ತಾಹ (ಆಗಸ್ಟ್ 1-7)

ಡಾ. ಮುರಲೀ ಮೋಹನ್ ಚೂಂತಾರುಡಾ. ಮುರಲೀ ಮೋಹನ್ ಚೂಂತಾರು1 Aug 2025 3:02 PM IST
share
ಮಗುವಿನ ಜೀವ ರಕ್ಷಕ ಸ್ತನ್ಯಪಾನ

ಎದೆ ಹಾಲುಣಿಸುವಿಕೆ ಎನ್ನುವುದು ತಾಯಿಯ ಪ್ರಾಥಮಿಕ ಜವಾಬ್ದಾರಿ ಮತ್ತು ಜನ್ಮಸಿದ್ಧ ಹಕ್ಕು. ಸ್ತನ್ಯಪಾನದಿಂದ ಉಂಟಾಗುವ ಧನಾತ್ಮಕ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರತೀವರ್ಷ ಆಗಸ್ಟ್ ಮೊದಲ ವಾರದಂದು ವಿಶ್ವದಾದ್ಯಂತ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ. ನವಜಾತ ಶಿಶುಗಳಿಗೆ ತಾಯಿಯ ಹಾಲೇ ಆಹಾರ ಮತ್ತು ಅಮೃತ. ಮಗುವಿನ ದೈಹಿಕ, ಮಾನಸಿಕ ಮತ್ತು ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ಪೋಷಕಾಂಶಗಳು, ಪೌಷ್ಟಿಕಾಂಶಗಳು ಹಾಗೂ ಆ್ಯಂಟಿಬಾಡಿಗಳು ತಾಯಿಯ ಹಾಲಿನಲ್ಲಿ ಇರುವ ಕಾರಣದಿಂದ ಸ್ತನ್ಯಪಾನ ಶಿಶುಗಳಿಗೆ ಅತೀ ಅಗತ್ಯವಾಗಿದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಯುನಿಸೆಫ್ ಸಂಸ್ಥೆಗಳು ಕೂಡಾ ಸ್ತನ್ಯಪಾನದ ಅಗತ್ಯ ಮತ್ತು ಅನಿವಾರ್ಯತೆ ಬಗ್ಗೆ ಈ ಕೆಳಗಿನಂತೆ ಆದೇಶ ಹೊರಡಿಸಿದೆ.

1) ಮಗು ಜನಿಸಿದ ಒಂದು ಗಂಟೆಯೊಳಗೆ ಎದೆ ಹಾಲನ್ನು ನೀಡತಕ್ಕದ್ದು.

2) ಮಗುವಿಗೆ ಆರು ತಿಂಗಳು ಆಗುವವರೆಗೆ ಸ್ತನ್ಯಪಾನ ಮಾಡಿಸಬೇಕು. ಎದೆಹಾಲು ಅಲ್ಲದೆ ಬೇರೆ ಯಾವುದೇ ಆಹಾರ ನೀಡಬಾರದು.

3) ಸ್ತನ್ಯಪಾನವನ್ನು ಎರಡು ವರ್ಷಗಳವರೆಗೆ ಮುಂದುವರಿಸಬಹುದು.

4) ಮಗುವಿಗೆ ಆರು ತಿಂಗಳು ಆದ ಬಳಿಕ ಸೂಕ್ತವಾದ ಪೂರಕ ಆಹಾರವನ್ನು ಆರಂಭಿಸಬಹುದು.

ಸ್ತನ್ಯಪಾನದ ಪ್ರಯೋಜನಗಳು

ತಾಯಿಯ ಎದೆಹಾಲಿನಲ್ಲಿರುವ ಪ್ರೊಟೀನ್ ಮಗುವಿನ ಮೆದುಳು ಬೆಳವಣಿಗೆಗೆ ಅತೀ ಅವಶ್ಯಕ ಮತ್ತು ಎದೆ ಹಾಲಿನಲ್ಲಿರುವ ಕೊಬ್ಬಿನ ಅಂಶವು ಮಗುವಿನ ನರಮಂಡಲ ವ್ಯವಸ್ಥೆ ಅಭಿವೃದ್ಧಿಯಾಗಲು ಪೂರಕ. ತಾಯಿಯ ಎದೆ ಹಾಲಿನಲ್ಲಿ ಇರುವ ಸೋಡಿಯಂ, ಜಿಂಕ್ ಹಾಗೂ ಇತರ ಲವಣಗಳು ಮಗುವಿನ ರಕ್ಷಣಾ ವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ. ರಕ್ತಹೀನತೆ, ಕ್ಯಾಲ್ಸಿಯಂ ಕೊರತೆ, ಅಲರ್ಜಿ, ಅಸ್ತಮಾ, ಕಾಮಾಲೆ, ಹೃದ್ರೋಗ ಮತ್ತು ಜಠರ ರೋಗಗಳನ್ನು ತಡೆಗಟ್ಟಲು ತಾಯಿಯ ಎದೆ ಹಾಲು ಅತೀ ಅಗತ್ಯ. ಎದೆಹಾಲನ್ನು ಯಥೇಚ್ಛವಾಗಿ ಕುಡಿದ ಮಗುವಿನ ಬುದ್ಧಿಮಟ್ಟವು ಹೆಚ್ಚಾಗಿರುತ್ತದೆ ಎಂದೂ ಅಧ್ಯಯನಗಳಿಂದ ತಿಳಿದುಬಂದಿದೆ. ತಾಯಿಯ ಎದೆ ಹಾಲಿನಲ್ಲಿ ಹೇರಳವಾಗಿ ಕಿಣ್ವಗಳು, ಆ್ಯಂಟಿ ಆಕ್ಸಿಡೆಂಟ್‌ಗಳು ಹಾಗೂ ಆ್ಯಂಟಿಬಾಡಿಗಳು ಇರುತ್ತವೆ ಮತ್ತು ಶಿಶುಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲಸ ಮಾಡುತ್ತದೆ. ತಾಯಿಯ ಎದೆ ಹಾಲು ಕುಡಿದ ಮಕ್ಕಳಲ್ಲಿ ಮಲಬದ್ದತೆ, ಅತಿಸಾರ, ಭೇದಿ ಹಾಗೂ ಇತರ ಜಠರ ಸಂಬಂಧಿ ಕಾಯಿಲೆ ವಿರಳವಾಗಿರುತ್ತದೆ. ಅದೇ ರೀತಿ ಎದೆ ಹಾಲು ನೀಡುವ ತಾಯಂದಿರಿಗೆ ಅಸ್ಥಿ ರಂಧ್ರತೆ ಬರುವ ಸಾಧ್ಯತೆ ಕಡಿಮೆ ಮತ್ತು ಅಂಡಾಶಯದ ಕ್ಯಾನ್ಸರ್ ಬರದಂತೆ ತಡೆಯುತ್ತದೆ. ಎಲ್ಲಕ್ಕಿಂತ ಮಿಗಿಲಾಗಿ ತಾಯಿ ಮತ್ತು ಮಗುವಿನ ಬಾಂಧವ್ಯ ವೃದ್ಧಿಸುತ್ತದೆ. ತಾಯಿಯ ಅನಗತ್ಯ ಗರ್ಭಧಾರಣೆಯನ್ನು ತಡೆಯುತ್ತದೆ. ಸ್ತನದ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆ. ದೇಹದ ತೂಕ ನಿಯಂತ್ರಿಸಿ ಸೌಂದರ್ಯ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕೊಲೆಸ್ಟ್ರಮ್ ಎಂಬ ಸಂಜೀವಿನಿ

ಮಗು ತಾಯಿಯ ಗರ್ಭದಿಂದ ಹೊರಬಂದ ಕೂಡಲೇ ತಾಯಿಯ ಸ್ತನಗಳಿಂದ ಒಂದೆರಡು ಗಂಟೆಗಳ ಕಾಲ ಹಳದಿ ಬಣ್ಣದ ಜೀವದ್ರವ್ಯ ಒಸರಲು ಆರಂಭವಾಗುತ್ತದೆ. ಎದೆ ಹಾಲು ಬರುವ ಮೊದಲೇ ಈ ಜೀವದ್ರವ್ಯ ಸಾಮಾನ್ಯವಾಗಿ ಎಲ್ಲಾ ಸಸ್ತನಿಗಳ ಸ್ತನಗಳಿಂದ ಒಸರುತ್ತದೆ. ಆಂಗ್ಲಭಾಷೆಯಲ್ಲಿ ಈ ದ್ರವವನ್ನು ಕೊಲೆಸ್ಟ್ರಮ್ ಎಂದು ಕರೆಯುತ್ತಾರೆ. ಕೊಲೆಸ್ಟ್ರಮ್ ನಸು ಹಳದಿ ಬಣ್ಣದ ಅಂಟಾದ ಮಂದ ದ್ರವ್ಯವಾಗಿರುತ್ತದೆ. ಅಚ್ಚ ಕನ್ನಡದಲ್ಲಿ ಗಿಣ್ಣುಹಾಲು ಎಂದೂ ಕರೆಯುತ್ತಾರೆ. ಕೊಲೆಸ್ಟ್ರಮ್‌ಅತ್ಯಂತ ಅಮೂಲ್ಯವಾದ ಸಂಜೀವಿನಿ ಅಥವಾ ಜೀವದ್ರವ್ಯ ಎಂದರೂ ಅತಿಶಯೋಕ್ತಿಯಾಗಲಾರದು. ತಾಯಂದಿರು ಈ ಕೊಲೆಸ್ಟ್ರಮ್ ಅನ್ನು ಸಂಪೂರ್ಣವಾಗಿ ಮಗುವಿಗೆ ನೀಡಬೇಕು. ಒಂದು ಹನಿಯೂ ವ್ಯರ್ಥವಾಗದಂತೆ ಈ ಜೀವ ದ್ರವವನ್ನು ಮಗುವಿಗೆ ಸಿಗುವಂತೆ ಮಾಡುವ ಹೊಣೆಗಾರಿಕೆ ತಾಯಂದಿರು ಮತ್ತು ದಾದಿಯರಿಗೆ ಇರುತ್ತದೆ. ಈ ಕಾರಣದಿಂದಲೇ ತಾಯಂದಿರು ಮಗು ಹುಟ್ಟಿದ ಕೂಡಲೇ ಒಂದೆರಡು ಗಂಟೆಗಳ ಒಳಗೆ ಮಗುವಿಗೆ ಸ್ತನ್ಯಪಾನ ಮಾಡಿಸಲೇಬೇಕು. ಈ ಕೊಲೆಸ್ಟ್ರಮ್‌ನಲ್ಲಿ ತಾಯಿಯಿಂದ ಮಗುವಿಗೆ ಪೋಷಕಾಂಶಗಳು, ರೋಗಗಳಿಂದ ರಕ್ಷಣೆ ನೀಡುವ ಅತ್ಯಮೂಲ್ಯ ಆ್ಯಂಟಿಬಾಡಿಗಳು ಇರುತ್ತದೆ. ಈ ಆ್ಯಂಟಿಬಾಡಿಗಳು ಮಗುವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತವೆ. ಮಗುವಿನ ಜೀವ ರಕ್ಷಕ ವ್ಯವಸ್ಥೆ ಮತ್ತು ರಕ್ಷಣಾ ವ್ಯವಸ್ಥೆ ಸರಿಯಾಗಿ ಬೆಳವಣಿಗೆ ಆಗಿ, ತನ್ನಿಂತಾನೇ ತನ್ನದೇ ದೇಹದಲ್ಲಿ ಆ್ಯಂಟಿಬಾಡಿಗಳು ಉತ್ಪಾದನೆಯಾಗುವವರೆಗೆ ತಾಯಿಯಿಂದ ಕೊಲೆಸ್ಟ್ರಮ್‌ನ ಜೊತೆಗೆ ಬಳುವಳಿಯಾಗಿ ಬಂದ ಆ್ಯಂಟಿಬಾಡಿಗಳು ಮಗುವನ್ನು ಮಾರಣಾಂತಿಕ ರೋಗಗಳಿಂದ ರಕ್ಷಿಸುತ್ತವೆ. ಮಗುವಿನ ರಕ್ಷಣಾ ವ್ಯವಸ್ಥೆಗೆ ಪೂರಕವಾಗಿ ಕೆಲಸ ಮಾಡಿ ಯಾವುದೇ ಸೋಂಕು ಶಿಶುವಿಗೆ ಬಾರದಂತೆ ತಡೆಯುತ್ತದೆ. ಈ ಜೀವದ್ರವ್ಯ ಕೊಲೆಸ್ಟ್ರಮ್‌ನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್ ಇರುತ್ತದೆ. ಈ ಪ್ರೊಟೀನ್ ಮಗುವಿನ ಆರಂಭಿಕ ಬೆಳವಣಿಗೆಗೆ ಮತ್ತು ರಕ್ಷಣಾ ವ್ಯವಸ್ಥೆಯನ್ನು ಸುದೃಢಗೊಳಿಸಲು ಅತೀ ಅವಶ್ಯಕ.

ಶಿಶುಗಳಲ್ಲಿ ಜೀರ್ಣಾಂಗ ವ್ಯವಸ್ಥೆ ಅತ್ಯಂತ ಚಿಕ್ಕದಾಗಿದ್ದು ಪ್ರಾಥಮಿಕ ಹಂತದಲ್ಲಿ ಇರುತ್ತದೆ. ಇಂತಹ ಸಂದರ್ಭದಲ್ಲಿ ಅತೀ ಹೆಚ್ಚು ಸಾಮರ್ಥ್ಯದ ಪೋಷಕಾಂಶಯುಕ್ತ ಪ್ರೊಟೀನ್ ಮತ್ತು ಖನಿಜಾಂಶಗಳು, ಜೀವಧಾತುಗಳನ್ನು ಅತೀ ಕಡಿಮೆ ಗಾತ್ರದಲ್ಲಿ ನೀಡುತ್ತದೆ. ಈ ಕೊಲೆಸ್ಟ್ರಮ್ ಮಗುವಿಗೆ ಮೊದಲ ಮಲವಿಸರ್ಜನೆ ಮಾಡಲು ಪೂರಕವಾದ ವಾತಾವರಣ ನಿರ್ಮಿಸಿ ಕೊಡುತ್ತದೆ. ಶಿಶುಗಳ ಮೊದಲ ಮಲವನ್ನು ಮೆಕೋನಿಯಮ್ ಎನ್ನುತ್ತಾರೆ. ಇದರ ಮುಖಾಂತರ ದೇಹದಲ್ಲಿನ ಹೆಚ್ಚಿನ ಪ್ರಮಾಣದ ‘ಬಿಲುರುಬಿನ್’ ಎಂಬ ವಸ್ತು ದೇಹದಿಂದ ಹೊರಹಾಕಲ್ಪಡುತ್ತದೆ. ಮಗು ತಾಯಿಯ ಗರ್ಭದಿಂದ ಹೊರ ಬಂದಾಗ ರಕ್ತದ ಪ್ರಮಾಣ ತೀವ್ರವಾಗಿ ಕಡಿಮೆಯಾಗಿ, ಕೆಂಪು ರಕ್ತಕಣಗಳು ಸತ್ತು ಹೋಗಿ ಅತಿ ಹೆಚ್ಚು ಪ್ರಮಾಣದಲ್ಲಿ ಬಿಲುರುಬಿನ್ ದೇಹದಲ್ಲಿ ಶೇಖರಣೆಯಾದಲ್ಲಿ ಮಗುವಿಗೆ ಕಾಮಾಲೆ ರೋಗ ಅಥವಾ ಜಾಂಡೀಸ್ ಬರುತ್ತದೆ. ಒಟ್ಟಿನಲ್ಲಿ ಈ ‘ಬಿಲುರುಬಿನ್’ ವರ್ಣದ್ರವ್ಯ ಸರಾಗವಾಗಿ ದೇಹದಿಂದ ಹೊರ ಹೋಗಲು ಕೊಲೆಸ್ಟ್ರಮ್ ಸಹಾಯ ಮಾಡುತ್ತದೆ.

ಕೊಲೆಸ್ಟ್ರಮ್‌ನಲ್ಲಿ ದೇಹದ ರಕ್ಷಣಾ ವ್ಯವಸ್ಥೆಯ ಸೈನಿಕರಾದ ‘ಲಿಂಪೋಸೈಟ್’ ಎಂಬ ಬಿಳಿರಕ್ತಕಣಗಳು ಮತ್ತು ಅತೀ ಪ್ರಮುಖವಾದ ಆ್ಯಂಟಿಬಾಡಿಗಳಾದ IgA, IgG ಮತ್ತು IgM ಇರುತ್ತವೆ. ಇದಲ್ಲದೆ ಲೈಜೋಜೈಮ್, ಲಾಕ್ಟೋಪೆರಾಕ್ಸಿಡೇಸ್, ಕಾಂಪ್ಲಿಮೆಂಟ್, ಪಾಲಿಪೆಪ್ಟೈಡ್, ಇಂಟರ್ಲ್ಯುಕಿನ್, ಸೈಟೋಕೈನ್ ಮುಂತಾದ ಅತೀ ಅವಶ್ಯಕ ಜೀವರಕ್ಷಕ ಧಾತುಗಳು ಇರುತ್ತವೆ.

ಕೊನೆಮಾತು

ಜಗತ್ತಿನಲ್ಲಿ ಜನ್ಮವೆತ್ತ ಪ್ರತೀ ಜೀವಸಂಕುಲಕ್ಕೂ ಹುಟ್ಟಿದ ತಕ್ಷಣದಿಂದ ಆಹಾರ ಅತೀ ಅವಶ್ಯಕ. ನವಜಾತ ಶಿಶುವಿಗೆ ತಾಯಿಯ ಎದೆಹಾಲಿಗೆ ಸರಿ ಸಮಾನವಾದ ಆಹಾರ ಇನ್ನೊಂದಿಲ್ಲ. ಎದೆಹಾಲು ಎನ್ನುವುದು ಮಗುವಿಗೆಂದೇ ತಯಾರಾದ ನೈಸರ್ಗಿಕ ಆಹಾರ ಅಥವಾ ಜೀವ ರಕ್ಷಕ ಜೀವದ್ರವ್ಯ. ಎದೆಹಾಲು ಕುಡಿಸುವುದರಿಂದ ತಾಯಿಗೆ ಮಾತೃತ್ವದ ಖುಷಿ ದೊರಕಿದರೆ ಮಗುವಿಗೆ ಆಹಾರದ ಜೊತೆಗೆ ಸುರಕ್ಷತೆಯ ಭಾವ ಮೂಡುತ್ತದೆ.

share
ಡಾ. ಮುರಲೀ ಮೋಹನ್ ಚೂಂತಾರು
ಡಾ. ಮುರಲೀ ಮೋಹನ್ ಚೂಂತಾರು
Next Story
X