Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚುನಾವಣಾ ಆಯೋಗ ಎಂಬ ಕೇಂದ್ರದ ಕೈ ಗೊಂಬೆ

ಚುನಾವಣಾ ಆಯೋಗ ಎಂಬ ಕೇಂದ್ರದ ಕೈ ಗೊಂಬೆ

ಸನತ್ ಕುಮಾರ ಬೆಳಗಲಿಸನತ್ ಕುಮಾರ ಬೆಳಗಲಿ28 July 2025 11:09 AM IST
share
ಚುನಾವಣಾ ಆಯೋಗ ಎಂಬ ಕೇಂದ್ರದ ಕೈ ಗೊಂಬೆ
ಮೋದಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಶೇಷನ್‌ರಂಥ ಚುನಾವಣಾ ಆಯುಕ್ತರು ಬರುವುದು ಬೇಕಾಗಿರಲಿಲ್ಲ. ತಾವು ಹೇಳಿದಂತೆ ಕೇಳುವ ಚುನಾವಣಾ ಆಯುಕ್ತರು ಅದಕ್ಕೆ ಬೇಕಾಗಿತ್ತು. ಆ ಕಾರಣಕ್ಕಾಗಿ ತಮಗೆ ಅಡ್ಡಿಯಾಗಬಾರದೆಂದು ಸುಪ್ರೀಂಕೋರ್ಟ್ ತೀರ್ಪನ್ನು ಕಡೆಗಣಿಸಿ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯನ್ನು ಮಾಡಿಕೊಂಡಿತು.

ಹನ್ನೊಂದು ವರ್ಷಗಳ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದವರು ಮಾಡಿದ ಮೊದಲ ಕೆಲಸ ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುವುದು. ನಂತರ ಅವುಗಳನ್ನು ಒಂದೊಂದಾಗಿ ನಿಷ್ಕ್ರಿಯ ಗೊಳಿಸುವದು. ಅದಾದ ಮೇಲೆ ತಮ್ಮ ರಾಜಕೀಯ ಉದ್ದೇಶಗಳಿಗಾಗಿ ಅವುಗಳನ್ನು ಬಳಸಿಕೊಳ್ಳುವುದು.ಕ್ರಮೇಣ ಸಂಸದೀಯ ಜನತಂತ್ರದ ಸಮಾಧಿಯ ಮೇಲೆ ನಿರಂಕುಶ ಸರ್ವಾಧಿಕಾರವನ್ನು ಹೇರುವುದು.ಚುನಾವಣೆಯಲ್ಲಿ ಜನ ತಿರಸ್ಕರಿಸಿದಾಗ ಆಯೋಗದ ಮೂಲಕ ಅಧಿಕಾರ ಹಿಡಿಯುವುದು ನಿರಾತಂಕವಾಗಿ ನಡೆದಿದೆ. ಇದೀಗ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅದೇ ಚುನಾವಣಾ ಆಯೋಗವನ್ನು ಅತ್ಯಂತ ವ್ಯವಸ್ಥಿತವಾಗಿ ಬಳಸಿಕೊಳ್ಳಲಾಗುತ್ತಿದೆ.ಬಿಹಾರದಲ್ಲಿ 52 ಲಕ್ಷ ಮಂದಿ ಬಡ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯ ಹೆಸರಿನಲ್ಲಿ ಈ ಕತ್ತರಿ ಪ್ರಯೋಗ ನಡೆದಿದೆ.

ವಿಧಾನಸಭಾ ಚುನಾವಣೆಯಿಂದ ಲೋಕಸಭಾ ಚುನಾವಣೆಯ ವರೆಗೆ ಮತದಾರರ ಪಟ್ಟಿಯಲ್ಲಿ ಉಂಟಾಗುತ್ತಿರುವ ಅಸಹಜ ಹೆಚ್ಚಳವು ಈ ಸಂದೇಹಕ್ಕೆ ಕಾರಣವಾಗಿದೆ.ಕರ್ನಾಟಕದಲ್ಲೂ ಒಂದು ಲೋಕಸಭಾ ಕ್ಷೇತ್ರದಲ್ಲಿ ಭಾರೀ ಪ್ರಮಾಣದ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಆರೋಪಿಸಿದ್ದರು.

ಮತದಾರರ ಪಟ್ಟಿಯ ಪರಿಷ್ಕರಣೆಯ ಹೆಸರಿನಲ್ಲಿ 45 ವರ್ಷಕ್ಕಿಂತ ಹೆಚ್ಚಿನ ವಯೋಮಾನದ ಸಾವಿರಾರು ಮಂದಿಯನ್ನು ಕೃತಕವಾಗಿ ಮತದಾರರ ಪಟ್ಟಿಗೆ ಸೇರಿಸಲಾಗಿದೆ

ಅಸಲಿಗೆ ಮತದಾರರ ಪಟ್ಟಿಯ ಈ ವಿಶೇಷ ಪರಿಷ್ಕರಣೆ ಅಂದರೆ ಏನು? ಚುನಾವಣಾ ಆಯೋಗಕ್ಕೆ ಅತ್ಯಂತ ಕಡಿಮೆ ಕಾಲಾವಧಿಯಲ್ಲಿ ಪರಿಷ್ಕರಣೆಯ ಈ ಪ್ರಕಿಯೆಯ ಅಗತ್ಯವೇನಿತ್ತು. ಸೋಲಿನ ಭೀತಿಯಿಂದ ಬಿಜೆಪಿ ಚುನಾವಣಾ ಆಯೋಗದ ಮೂಲಕ ಇದನ್ನು ಮಾಡಿಸುತ್ತಿದೆಯೇ! ಈ ಬಗ್ಗೆ ಸಂಸತ್ತಿನ ಉಭಯ ಸದನಗಳ ಅಧಿವೇಶನದಲ್ಲಿ ಪ್ರತಿಪಕ್ಷಗಳು ಸರಕಾರದಿಂದ ಸ್ಪಷ್ಟತೆಯನ್ನು ಬಯಸಿದರೂ ಸರಕಾರ ಈ ಬಗ್ಗೆ ಮೌನವಾಗಿದೆ.ಸಂಸತ್ತಿನ ಅಧಿವೇಶನ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿದೇಶ ಪ್ರಯಾಣ ಮಾಡುತ್ತಿದ್ದಾರೆ. ಪ್ರಧಾನಿ ಸದನದಲ್ಲಿ ಇರಬೇಕೆಂಬ ಪ್ರತಿಪಕ್ಷಗಳ ಆಗ್ರಹ ಅರಣ್ಯ ರೋದನವಾಗಿದೆ.

2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಸಾಂವಿಧಾನಿಕ ಸಂಸ್ಥೆಗಳನ್ನು ಹಂತ ಹಂತವಾಗಿ ನಿಷ್ಕ್ರಿಯಗೊಳಿಸಿ ಅವುಗಳ ಸ್ವಾಯತ್ತೆೆಯನ್ನು ನಿರರ್ಥಕಗೊಳಿಸಿ ಅವುಗಳ ಮೇಲೆ ಹಿಡಿತ ಸಾಧಿಸಲು ಮುಂದಾಯಿತು. ಮೊದಲು ಮುಖ್ಯ ಚುನಾವಣಾ ಆಯುಕ್ತರ ನೇಮಕದ ಅಧಿಕಾರವನ್ನು ತನ್ನ ಕೈಗೆ ತೆಗೆದುಕೊಂಡಿತು.ಅದಕ್ಕಾಗಿ ಸಂಸತ್ತಿನಲ್ಲಿನ ತನ್ನ ಬಹುಮತವನ್ನು ಬಳಸಿಕೊಂಡಿತು.

ಸಂಸತ್ತಿನಲ್ಲಿರುವ ಬಹುಮತವನ್ನು ಬಳಸಿಕೊಂಡು ಪ್ರತಿಪಕ್ಷ ಸದಸ್ಯರನ್ನು ಹೊರಗೆ ಹಾಕಿ ಅತ್ಯಂತ ಮಹತ್ವದ ವಿಧೇಯಕಗಳಿಗೆ ಅಂಗೀಕಾರ ಪಡೆಯುತ್ತ ಬರಲಾಗಿದೆ. ಪ್ರತಿಪಕ್ಷಗಳನ್ನು ಮಾತ್ರವಲ್ಲ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಮುಖ್ಯ ಚುನಾವಣಾ ಆಯುಕ್ತರ ನೇಮಕ ಕುರಿತ ವಿಧೇಯಕವನ್ನೂ ಸಂಸತ್ತಿನಲ್ಲಿ ಮಂಡಿಸಿ ಅಂಗೀಕರಿಸಿಕೊಂಡಿತು. ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಆಯುಕ್ತರ ಆಯ್ಕೆ ಪ್ರಕ್ರಿಯೆಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಡುವ ವಿಧೇಯಕವನ್ನು ಪ್ರತಿಪಕ್ಷ ಸದಸ್ಯರನ್ನು ಅಮಾನತು ಮಾಡಿ ಅವರ ಅನುಪಸ್ಥಿತಿಯಲ್ಲಿ ಲೋಕಸಭೆಯಲ್ಲಿ ಮಂಡಿಸಿ ಕಳೆದ ವಾರ ಅಂಗೀಕಾರ ಪಡೆದ ಸಂಗತಿ ಎಲ್ಲರಿಗೂ ಗೊತ್ತಿದೆ. ಈ ವಿಧೇಯಕ ಕಾನೂನಾಗಿ ಜಾರಿಯಾದ ನಂತರ ಚುನಾವಣಾ ಆಯೋಗದ ಆಯುಕ್ತರ ನೇಮಕ ಸಂಪೂರ್ಣವಾಗಿ ಕೇಂದ್ರ ಸರಕಾರದ ನಿಯಂತ್ರಣಕ್ಕೆ ಬಂತು. ವಾಸ್ತವವಾಗಿ ಪ್ರಧಾನಮಂತ್ರಿ, ಸಂಸತ್ತಿನ ಪ್ರತಿಪಕ್ಷ ನಾಯಕ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರನ್ನು ಒಳಗೊಂಡ ಸಮಿತಿಯ ಶಿಫಾರಸಿನ ಮೇರೆಗೆ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಆಯುಕ್ತರ ನೇಮಕಾತಿ ನಡೆಯಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಅದನ್ನು ಕಡೆಗಣಿಸಿ ಕಾನೂನು ತಿದ್ದುಪಡಿ ಮೂಲಕ ಸರಕಾರ ಚುನಾವಣಾ ಆಯುಕ್ತರ ನೇಮಕವನ್ನು ತನ್ನ ಕೈಗೆ ತೆಗೆದುಕೊಂಡಿತು.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆ ಪಾರದರ್ಶಕ ವಾಗಿರಬೇಕೆಂದು ಸುಪ್ರೀಂಕೋರ್ಟ್ ಆಶಯವನ್ನು ವ್ಯಕ್ತಪಡಿಸಿತ್ತು.ಈ ಕುರಿತಂತೆ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಸುದೀರ್ಘ ವಿಚಾರಣೆ ನಡೆಸಿ ಈ ಹಿಂದೆ ತೀರ್ಪು ನೀಡಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಆಯುಕ್ತರ ನೇಮಕ ಕಡ್ಡಾಯವಾಗಿ ಪ್ರಧಾನಮಂತ್ರಿ, ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಶಿಫಾರಸಿನಂತೆ ನಡೆಯ ಬೇಕೆಂದು ಸೂಚಿಸಿತು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಚಾರಿತ್ರಿಕ ತೀರ್ಪು ಎಂದು ವರ್ಣಿಸಲಾಗಿತ್ತು. ಆದರೆ ಮೋದಿ ಸರಕಾರ ಸುಪ್ರೀಂಕೋರ್ಟ್ ತೀರ್ಪಿಗೆ ಸವಾಲು ಹಾಕುವಂತೆ ತನ್ನ ಇಷ್ಟದಂತೆ ಕಾನೂನಿಗೆ ತಿದ್ದುಪಡಿ ತಂದು ಚುನಾವಣಾ ಆಯುಕ್ತರ ನೇಮಕದ ಅಧಿಕಾರವನ್ನು ತನ್ನ ಕೈಗೆ ತೆಗೆದುಕೊಂಡಿತು.

ಸುಪ್ರೀಂಕೋರ್ಟ್‌ನ ಸದುದ್ದೇಶದ ತೀರ್ಪನ್ನು ಕಡೆಗಣಿಸಿ ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಮೂರ್ತಿ ಅವರನ್ನು ಕೈ ಬಿಟ್ಟು ಅವರ ಬದಲಾಗಿ ಕೇಂದ್ರ ಸರಕಾರದ ಸಂಪುಟ ದರ್ಜೆಯ ಸಚಿವರೊಬ್ಬರನ್ನು ನೇಮಕ ಮಾಡಿಕೊಳ್ಳಲು ಮುಂದಾಯಿತು. ಯಾವ ಸಚಿವರು ಆಯ್ಕೆ ಸಮಿತಿಯಲ್ಲಿ ಇರಬೇಕೆಂಬುದನ್ನು ತೀರ್ಮಾನಿಸುವ ಅಧಿಕಾರವನ್ನು ಪ್ರಧಾನಮಂತ್ರಿ ಅವರಿಗೆ ನೀಡಲಾಯಿತು. ಹೀಗೆ ಮೂವರ ಸಮಿತಿಯಲ್ಲಿ ಇಬ್ಬರು ಬೆಂಬಲಿಸುವ ತೀರ್ಮಾನ ಬಹುಮತದ ಹಾಗೂ ಅಂತಿಮ ತೀರ್ಮಾನವಾಗುತ್ತದೆ ಎಂದು ಪರಿಗಣಿಸಲಾಯಿತು.ಇದರ ಅರ್ಥ, ಒಂದು ವೇಳೆ ಸಮಿತಿಯಲ್ಲಿ ಇರುವ ಪ್ರತಿಪಕ್ಷ ನಾಯಕರು ಒಪ್ಪಿಗೆ ನೀಡದಿದ್ದರೂ ಆಳುವ ಸರಕಾರ ಇಷ್ಟಪಟ್ಟವರೇ ಮುಖ್ಯ ಚುನಾವಣಾ ಆಯುಕ್ತರು ಮತ್ತು ಆಯುಕ್ತರಾಗಿ ನೇಮಕಗೊಳ್ಳುವುದು ಸಹಜ ಎಂದಾಯಿತು. ಅಂದರೆ ಮೋದಿ ಸರಕಾರ ಹೇಳಿದಂತೆ ಕೇಳುವ ಕೈಗೊಂಬೆಯಾದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಆಯುಕ್ತರು ಇರಬೇಕೆಂದಾಯಿತು.

ಒಟ್ಟಾರೆ ಚುನಾವಣಾ ಆಯೋಗದ ಇತಿಹಾಸವನ್ನು ಅವಲೋಕಿಸಿದರೆ ಅದು ಮುಂಚಿನಿಂದಲೂ ಆಳುವ ಸರಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತ ಬಂದಿದೆ. ಮೋದಿ ಸರಕಾರ ಬಂದ ಆನಂತರವಂತೂ ಚುನಾವಣಾ ಆಯೋಗದ ಪಾರದರ್ಶಕತೆ ಅನೇಕ ಬಾರಿ ಸಂಶಯಕ್ಕೆ ಕಾರಣವಾಗಿದೆ. ಸರಕಾರದ ಮುಲಾಜಿಗೆ ಒಳಗಾಗದ ನಿಷ್ಠುರ, ದಕ್ಷ ಆಯುಕ್ತರು ಇರಲಿಲ್ಲವೆಂದಲ್ಲ. ಟಿ.ಎನ್.ಶೇಷನ್ ಮುಖ್ಯ ಚುನಾವಣಾ ಆಯುಕ್ತರಾಗಿದ್ದಾಗ ಯಾರ ಮುಲಾಜಿಗೂ ಒಳಗಾಗದೆ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಿದ್ದರು. ಜೆ.ಎ.ಲಿಂಗ್ಡೋ ಅವರು ಮುಖ್ಯ ಚುನಾವಣಾ ಆಯುಕ್ತರಾಗಿದ್ದಾಗಲೂ ನಿಷ್ಪಕ್ಷವಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಅಧಿಕಾರದಲ್ಲಿ ಇರುವ ಪಕ್ಷದ, ಸರಕಾರದ ತಾಳಕ್ಕೆ ತಕ್ಕಂತೆ ಕುಣಿದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದರೆ ಅತಿಶಯೋಕ್ತಿಯಲ್ಲ.

ವಾಸ್ತವಿಕವಾಗಿ ಚುನಾವಣಾ ಆಯೋಗ ಈಗಾಗಲೇ ಸಾಕಷ್ಟು ಅಧಿಕಾರ ಹೊಂದಿದೆ. ಅದಕ್ಕೆ ಹೊಸ ವಿಶೇಷಾಧಿಕಾರಗಳ ಅಗತ್ಯವಿರಲಿಲ್ಲ. ಇದಕ್ಕೆ ಟಿ.ಎನ್. ಶೇಷನ್ ಅವರ ಕಾಲಾವಧಿ ಉದಾಹರಣೆಯಾಗಿತ್ತು. 1990ರಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡ ಅವರ ಹೆಸರು ಕೇಳಿದರೆ ಸಾಕು ಅಕ್ರಮ ವ್ಯವಹಾರಗಳ ಮೂಲಕ ಚುನಾವಣೆಯಲ್ಲಿ ಗೆಲ್ಲುತ್ತಿದ್ದ ರಾಜಕಾರಣಿಗಳು ನಡುಗುತ್ತಿದ್ದರು. ಆಯೋಗಕ್ಕೆ ಇದ್ದ ಸಂವಿಧಾನಾತ್ಮಕ ಅಧಿಕಾರಗಳನ್ನು ಶೇಷನ್ ಆಯುಧಗಳಂತೆ ಪ್ರಯೋಗಿಸಿದರು. ಎಲ್ಲೇ ಅಕ್ರಮಗಳ ವಾಸನೆಗಳನ್ನು ಕಂಡರೂ ಚುನಾವಣೆಯನ್ನೇ ರದ್ದು ಮಾಡಿಬಿಡುತ್ತಿದ್ದರು. ಮತದಾರರ ಗುರುತಿನ ಚೀಟಿಗಳಿಗೆ ಸಂಬಂಧಿಸಿದ ಮತದಾರರ ಭಾವಚಿತ್ರ ಅಂಟಿಸುವುದನ್ನು ಕಡ್ಡಾಯಗೊಳಿಸಿದರು. ಫೋಟೊ ಸಹಿತ ಗುರುತಿನ ಚೀಟಿ ಜಾರಿಗೆ ಬರುವವರೆಗೆ ಚುನಾವಣೆಗಳನ್ನೇ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು. ಹೀಗಾಗಿ ಸರಕಾರ ಮಣಿಯಬೇಕಾಯಿತು. ಆಗ ಅವರೊಬ್ಬರೇ ಆಯುಕ್ತರು. ಇತರ ಇಬ್ಬರು ಇರಲಿಲ್ಲ. ಆದರೆ ಆಗ ಪ್ರಧಾನಿಯಾಗಿದ್ದ ಪಿ.ವಿ. ನರಸಿಂಹರಾವ್ ಸರಕಾರ ಶೇಷನ್‌ಗೆ ಕಡಿವಾಣ ಹಾಕಲು 1993ರಲ್ಲಿ ಇನ್ನೆರಡು ಆಯುಕ್ತ ಹುದ್ದೆಗಳನ್ನು ಸೃಷ್ಟಿಸಿತು.

__ಆದರೆ ಮೋದಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಶೇಷನ್‌ರಂಥ ಚುನಾವಣಾ ಆಯುಕ್ತರು ಬರುವುದು ಬೇಕಾಗಿರಲಿಲ್ಲ. ತಾವು ಹೇಳಿದಂತೆ ಕೇಳುವ ಚುನಾವಣಾ ಆಯುಕ್ತರು ಅದಕ್ಕೆ ಬೇಕಾಗಿತ್ತು.ಆ ಕಾರಣಕ್ಕಾಗಿ ತಮಗೆ ಅಡ್ಡಿಯಾಗಬಾರದೆಂದು ಸುಪ್ರೀಂಕೋರ್ಟ್ ತೀರ್ಪನ್ನು ಕಡೆಗಣಿಸಿ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯನ್ನು ಮಾಡಿಕೊಂಡಿತು. ಸಂವಿಧಾನದ 324 (2) ಕಲಮಿನ ಪ್ರಕಾರ ಚುನಾವಣಾ ಆಯೋಗದ ಹುದ್ದೆಗಳಿಗೆ ನೇಮಕಾತಿ ಅಧಿಕಾರ ರಾಷ್ಟ್ರಪತಿಯವರದು. ಆದರೆ ಯಾರನ್ನು ಆಯ್ಕೆ ಮಾಡಬೇಕೆಂಬುದನ್ನು ನಿರ್ಧರಿಸುವುದು ಪ್ರಧಾನಮಂತ್ರಿ. ಚುನಾವಣಾ ಆಯುಕ್ತರ ನೇಮಕದ ಕುರಿತು ಸಂಸತ್ತು ಯಾವುದಾದರೂ ಕಾಯ್ದೆಯನ್ನು ಮಾಡಿದರೆ ಅದರ ಪ್ರಕಾರ ನೇಮಕಾತಿ ಮಾಡಬೇಕಾಗುತ್ತದೆ. ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಚುನಾವಣಾ ಆಯೋಗವನ್ನು ಯಾವುದೇ ರಾಜಕೀಯ ಪಕ್ಷ ಇಷ್ಟ ಪಡುವುದಿಲ್ಲ.ಹನ್ನೊಂದು ವರ್ಷಗಳಿಂದ ಅಧಿಕಾರ ಹಿಡಿದು ಕೂತಿರುವ ಬಿಜೆಪಿಗಂತೂ ಅದು ಇಷ್ಟವಿರಲಿಲ್ಲ. ಅದಕ್ಕಾಗಿ ತನ್ನ ಕೈಗೊಂಬೆ ಚುನಾವಣಾ ಆಯುಕ್ತರನ್ನು ಅದು ನೇಮಕ ಮಾಡಿಕೊಂಡಿತು.

ಒಂದು ವೇಳೆ ಸುಪ್ರೀಂ ಕೋರ್ಟ್ ತೀರ್ಪಿನಂತೆ ಮುಖ್ಯ ನ್ಯಾಯಮೂರ್ತಿಗಳನ್ನು ಸಮಿತಿಯಲ್ಲಿ ಸೇರ್ಪಡೆ ಮಾಡಿದ್ದರೆ ಅವರೂ ಮತ್ತು ಪ್ರತಿಪಕ್ಷ ನಾಯಕ ಒಟ್ಟಿಗೆ ಮತ ಚಲಾಯಿಸಿದರೆ ಸರಕಾರ ಬಯಸಿರುವ ಆಯುಕ್ತರ ನೇಮಕ ಅಸಾಧ್ಯವಾಗುತ್ತಿತ್ತು. ಹಾಗಾಗಬಾರದೆಂದು ಮೋದಿ ಸರಕಾರ ಈ ಶಾಸನ ತಂದಿತು. ಹೀಗಾಗಿ ಚುನಾವಣಾ ಆಯೋಗ ಆಳುವ ಸರಕಾರದ ಕೈಗೊಂಬೆಯಾಯಿತು. ಈಗ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಮೂಲ ಯಾರೆಂಬುದು ಸ್ಪಷ್ಟವಾಗುತ್ತದೆ.

ಆದರೆ ಯಾವುದೇ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಗೌರವವಿಲ್ಲದ, ತನ್ನದೇ ಗುಪ್ತ ಕಾರ್ಯಸೂಚಿಯನ್ನು ಹೊಂದಿರುವ ಪಕ್ಷದಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ? ಬಲವಾದ ಜನ ಪ್ರತಿರೋಧವೊಂದೇ ಈ ನಿರಂಕುಶ ಸರ್ವಾಧಿಕಾರಕ್ಕೆ ಕಡಿವಾಣ ಹಾಕಲು ಸಾಧ್ಯ.

share
ಸನತ್ ಕುಮಾರ ಬೆಳಗಲಿ
ಸನತ್ ಕುಮಾರ ಬೆಳಗಲಿ
Next Story
X