ರಾಯಚೂರು | ಅಲ್ ಕರಿಮ್ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ರಾಯಚೂರು : ಅಲ್ ಕರಿಮ್ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಸಮಾಲೋಚನೆ ಕಾರ್ಯಕ್ರಮವನ್ನು ಸೆ.12ರಂದು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಜನಾಬ್ ಯು. ನಿಸಾರ್ ಅಹಮದ್ ಅವರು ಬೆಂಗಳೂರಿನಿಂದ ಆಗಮಿಸಿ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಹತ್ವ ಹಾಗೂ ವೃತ್ತಿ ಮಾರ್ಗದರ್ಶನದ ಅವಶ್ಯಕತೆ ಕುರಿತು ಸಲಹೆ ನೀಡಿದರು.
ವಿದ್ಯಾರ್ಥಿಗಳಲ್ಲಿ ವೃತ್ತಿ ಮಾರ್ಗದರ್ಶನ ಕುರಿತು ಸಂವಾದಗಳು ನಡೆಯಬೇಕು. ಕಾರ್ಯಾಗಾರಗಳ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಅಲ್ ಕರಿಮ್ ಕಾಲೇಜಿನ ಉಪಾಧ್ಯಕ್ಷ ಜನಾಬ್ ಮುಹಮ್ಮದ್ ಇಕ್ಬಾಲ್ (MIC) ಮಾತನಾಡಿ, ಭವಿಷ್ಯದಲ್ಲಿ ಕಾಲೇಜಿನಲ್ಲಿ ನಿಯಮಿತವಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದಕ್ಕಾಗಿ ವಿಶೇಷ ತರಬೇತಿದಾರರನ್ನು ಆಹ್ವಾನಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜನಾಬ್ ಮೀರ್ ಶರೀಫ್, ಜನಾಬ್ ಕೆ.ಇಕ್ಬಾಲ್, ಮುಹಮ್ಮದ್ ಫಿರೋಝ್ ಹಮ್‌ರಾಝ್, ಮಹಾನಗರ ಪಾಲಿಕೆ ಸದಸ್ಯರು, ಪ್ರಾಚಾರ್ಯ ಸಲೀಂ ಉನ್ನಿಸ, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.