ರಾಯಚೂರು | ಮೀನುಗಾರಿಕೆ ಇಲಾಖೆಯಿಂದ ಪರವಾನಿಗೆ ಅರ್ಜಿ ಆಹ್ವಾನ

ರಾಯಚೂರು : ಇಲ್ಲಿನ ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ಮಾನವಿ ತಾಲ್ಲೂಕಿನ ತುಂಗಾಭದ್ರಾ ನದಿಭಾಗದಲ್ಲಿ ಮೀನು ಹಿಡಿಯಲು ಪರವಾನಿಗೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತುಂಗಾಭದ್ರಾ ನದಿಭಾಗದ ಆಯನೂರನಿಂದ ದದ್ದಲ್‍ವರೆಗೆ ಮೀನು ಹಿಡಿಯಲು ಪರವಾನಿಗೆಗಾಗಿ ಸ್ಥಳೀಯ ಮೀನುಗಾರರು ವಾಸಸ್ಥಳ, ಗುರುತಿನ ಚೀಟಿಯೊಂದಿಗೆ ನಿಗದಿತ ಶುಲ್ಕ ಪಾವತಿಸಿ ಜೂ.9ರಿಂದ ಜೂ.30 ರವರೆಗೆ ಪರವಾನಿಗೆಯನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





