ಸೆ.17ರಿಂದ 3 ದಿನ ರಾಯಚೂರು ಜಿಲ್ಲೆಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಪ್ರವಾಸ

ರಾಯಚೂರು :ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸೆಪ್ಟೆಂಬರ್ 17ರಿಂದ 19ರವರೆಗೆ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರವಾಸದ ವಿವರಗಳು :
ಸೆ.17 ರಂದು ಬೆಳಿಗ್ಗೆ 7 ಗಂಟೆಗೆ ಕಲಬುರಗಿ ನಗರದಿಂದ ನಿರ್ಗಮಿಸಿ, 10.30ಕ್ಕೆ ರಾಯಚೂರು ನಗರಕ್ಕೆ ಆಗಮಿಸುವರು.
ಬೆಳಿಗ್ಗೆ 11 ಗಂಟೆಗೆ ರಾಯಚೂರಿನ ಎಸ್‌ಎಸ್‌ಆರ್‌ಜಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಡೆಯುವ ಪಿಯು ಮತ್ತು ಪದವಿ ವಿದ್ಯಾರ್ಥಿನಿಯರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 1.30ಕ್ಕೆ ರಾಯಚೂರು ಜಿಲ್ಲಾಸ್ಪತ್ರೆಗೆ ಭೇಟಿ. ಮಧ್ಯಾಹ್ನ 3 ಗಂಟೆಗೆ ಯರಗೇರಾ ಗ್ರಾಮದ ಬಳಿಯ ಆದಿಕವಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ. ಸಂಜೆ 5.30ಕ್ಕೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಲಿದ್ದಾರೆ.
ಸೆ.18 ರಂದು ಬೆಳಿಗ್ಗೆ 10 ಗಂಟೆಗೆ ರಾಯಚೂರಿನ ರಂಗಮಂದಿರದಲ್ಲಿ ಕಲಾ ಸಂಕುಲ ಸಂಸ್ಥೆ ಹಮ್ಮಿಕೊಂಡ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12.30ಕ್ಕೆ ಸಿಂಧನೂರಿಗೆ ಆಗಮಿಸಿ, ಸುಕ್ಕಲಪೇಟೆ ರಸ್ತೆಯ ರಂಗಮಂದಿರದಲ್ಲಿ ಸಿಂದೋಳ ಸಮುದಾಯದ ಅಲೆಮಾರಿ ಮತ್ತು ದೇವದಾಸಿ ಮಹಿಳೆಯರೊಂದಿಗೆ ಸಂವಾದ ಕಾರ್ಯಕ್ರಮ. ಮಧ್ಯಾಹ್ನ 3 ಗಂಟೆಗೆ ಸಿಂಧನೂರು ತಾಲೂಕು ಆಸ್ಪತ್ರೆಗೆ, ಸಂಜೆ 4ಕ್ಕೆ ಸಿಂಧನೂರು ಪೊಲೀಸ್ ಠಾಣೆಗೆ ಭೇಟಿ. ಸಂಜೆ 7 ಗಂಟೆಗೆ ರಾಯಚೂರಿಗೆ ಮರಳಿ ವಾಸ್ತವ್ಯ ಹೂಡುವರು.
ಸೆ.19 ರಂದು ಬೆಳಿಗ್ಗೆ 11 ಗಂಟೆಗೆ ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆ. ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿ. ರಾತ್ರಿ 9 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ರೈಲಿನಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡುವರು ಎಂಬ ಮಾಹಿತಿಯನ್ನು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.