ರಾಮನಗರ | ತಡೆಗೋಡೆಗೆ ಕಾರು ಢಿಕ್ಕಿ: ಮೂವರು ಮೃತ್ಯು

ಸಾಂದರ್ಭಿಕ ಚಿತ್ರ
ರಾಮನಗರ, ಜು.13: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಅಪಘಾತದಲ್ಲಿ ಚಿಕ್ಕನಾಯಕಹಳ್ಳಿಯ ತಮ್ಮಣ್ಣ ಗೌಡ (56), ಪುತ್ರ ಮುತ್ತುರಾಜ್ (28) ಮತ್ತು ಹಾಸನ ಮೂಲದ ಚಾಲಕ ಸಚಿನ್ (27) ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸಂಜು ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳಯ ಹಾಗೂ ಮೃತಪಟ್ಟ ಮೂವರು ಬೆಂಗಳೂರಿನಲ್ಲಿ ವಾಸವಿದ್ದರು. ಹೀಗಾಗಿ ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮಕೊಂದಕ್ಕೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ರಾಮನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Next Story