Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಿಂಗಟಗೆರೆ: ಸುಸಜ್ಜಿತ ವಸತಿ ಶಾಲೆ...

ಸಿಂಗಟಗೆರೆ: ಸುಸಜ್ಜಿತ ವಸತಿ ಶಾಲೆ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಮರೀಚಿಕೆ

ಹೊಸ ಕಟ್ಟಡಕ್ಕೆ ಶಾಲೆಯ ಸ್ಥಳಾಂತರಕ್ಕೆ ನಿರ್ಲಕ್ಷ್ಯ:ಆರೋಪ

ಕೆ.ಎಲ್.ಶಿವುಕೆ.ಎಲ್.ಶಿವು17 Nov 2024 11:33 AM IST
share
ಸಿಂಗಟಗೆರೆ: ಸುಸಜ್ಜಿತ ವಸತಿ ಶಾಲೆ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಮರೀಚಿಕೆ

ಚಿಕ್ಕಮಗಳೂರು, ನ.16: ಮೂಲಸೌಕರ್ಯಗಳೇ ಇಲ್ಲದ ವಸತಿ ಶಾಲೆಯೊಂದರ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ರಾಜ್ಯ ಸರಕಾರ 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ವಸತಿ ಶಾಲೆಯ ಕಟ್ಟಡ ನಿರ್ಮಿಸಿ ವರ್ಷ ಕಳೆಯುತ್ತಿದ್ದರೂ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ವಸತಿ ಶಾಲೆಯ ಮಕ್ಕಳ ಪಾಲಿಗೆ ಸುಸಜ್ಜಿತ ವಸತಿ ನಿಲಯದ ಕಟ್ಟಡದಲ್ಲಿ ವ್ಯಾಸಂಗ ಮಾಡುವ ಭಾಗ್ಯ ಸಿಗದಂತಾಗಿದೆ.

ಜಿಲ್ಲೆಯ ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ವಿಶಾಲವಾದ ಆಟದ ಮೈದಾನ, ಸುಸಜ್ಜಿತವಾದ ಕಟ್ಟಡ ಹಾಗೂ ಕೊಠಡಿಗಳು, ನೀರಿನ ವ್ಯವಸ್ಥೆ, ಉತ್ತಮ ರಸ್ತೆ ಸೇರಿದಂತೆ ಸಕಲ ಸೌಲಭ್ಯಗಳನ್ನು ಹೊಂದಿದ್ದರೂ ಈ ವಸತಿ ಶಾಲೆಯಲ್ಲಿರುವ ಸುಮಾರು 250ಕ್ಕೂ ಹೆಚ್ಚು ಬಡವರ್ಗದ ಮಕ್ಕಳು ಮಾತ್ರ ಶೆಡ್‌ನಂತಹ ಇಕ್ಕಟ್ಟಾದ ಹಾಗೂ ಯಾವ ಮೂಲಭೂತ ಸೌಕರ್ಯಗಳೂ ಇಲ್ಲದ ಕಟ್ಟಡದಲ್ಲಿ ಪಾಠ ಕೇಳಬೇಕಾದ ಮತ್ತು ಅದೇ ಶೆಡ್‌ನಂತಹ ಕಟ್ಟಡದಲ್ಲಿ ವಾಸ ಮಾಡಬೇಕಾದ ನರಕಯಾತನೆಯ ಪರಿಸ್ಥಿತಿಯಲ್ಲಿದ್ದಾರೆ.

ಸಿಂಗಟಗೆರೆ ವಸತಿ ಶಾಲೆಯಲ್ಲಿ ಸದ್ಯ 6ರಿಂದ 10ನೇ ತರಗತಿಯ 250ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಕಡೂರು ತಾಲೂಕಿನ ವಿವಿಧ ಗ್ರಾಮಗಳ ಬಹುತೇಕ ಬಡ ವರ್ಗದ ಮಕ್ಕಳು ಉತ್ತಮ ಶಿಕ್ಷಣದ ಕನಸಿನೊಂದಿಗೆ ಈ ಶಾಲೆಗೆ ದಾಖಲಾಗಿದ್ದಾರೆ. ಶಾಲೆಯ ಪ್ರಾಂಶುಪಾಲರು, ಶಿಕ್ಷಕರಿಂದಾಗಿ ಮಕ್ಕಳಿಗೆ ಉತ್ತಮ ಶಿಕ್ಷಣವೇನೋ ಸಿಗುತ್ತಿದೆಯಾದರೂ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಬಡ ಮಕ್ಕಳಿಗೆ ಶೆಡ್ ಮಾದರಿಯ ಬಾಡಿಗೆ ಕಟ್ಟಡದಲ್ಲಿ ಶಿಕ್ಷಣ ಹಾಗೂ ಉಳಿದುಕೊಳ್ಳಬೇಕಾದ ದುರ್ಗತಿ ಬಂದೊದಗಿದೆ ಎಂದು ಪೋಷಕರು ದೂರುತ್ತಿದ್ದಾರೆ.

ಗ್ರಾಮದ ತೋಟವೊಂದರ ಮಧ್ಯೆ ಇರುವ ಬಾಡಿಗೆ ಕಟ್ಟಡದಲ್ಲಿ ಅಂಬೇಡ್ಕರ್ ವಸತಿ ಶಾಲೆಯ ಎಲ್ಲ ಮಕ್ಕಳು ಇಕ್ಕಟ್ಟಾದ ಕೊಠಡಿಯಲ್ಲಿ ಹಗಲು ವೇಳೆ ಪಾಠ ಕೇಳುತ್ತಿದ್ದರೆ, ರಾತ್ರಿ ವೇಳೆ ಕೊಠಡಿಗಳಲ್ಲಿರುವ ಬೆಂಚ್‌ಗಳನ್ನೇ ಹಾಸಿಗೆ ಮಾಡಿಕೊಂಡು ನಿದ್ರಿಸಬೇಕಿದೆ. ಬೆಳಗಾಗುತ್ತಿದ್ದಂತೆ ಮತ್ತೆ ಬೆಂಚ್‌ಗಳನ್ನು ಪಾಠ ಕೇಳಲು ಜೋಡಿಸಿಕೊಳ್ಳಬೇಕಿದೆ. ಪಾಠ ಕಲಿಯುವ ಕೊಠಡಿಯಲ್ಲಿ ಮಕ್ಕಳ ಬ್ಯಾಗ್‌ಗಳು, ಬಟ್ಟೆಗಳನ್ನೂ ಇರಿಸಿಕೊಳ್ಳಬೇಕಿದ್ದು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ, ನೀರು, ಕೊಠಡಿಗಳ ವ್ಯವಸ್ಥೆ ಈ ಶೆಡ್‌ನಲ್ಲಿಲ್ಲ. ಮಳೆಗಾಲದಲ್ಲಿ ಶೆಡ್‌ನ ಶೀಟುಗಳ ಮೇಲೆ ಮಳೆ ನೀರು ಬೀಳುವ ಸದ್ದಿನಿಂದಾಗಿ ಹಗಲು ವೇಳೆ ಪಾಠ ಕೇಳಲೂ ಆಗುತ್ತಿಲ್ಲ, ರಾತ್ರಿ ವೇಳೆ ಮಕ್ಕಳು ನೆಮ್ಮದಿಯಿಂದ ನಿದ್ರಿಸಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 8ವರ್ಷಗಳಿಂದ ಯಾವುದೇ ಮೂಲ ಸೌಕರ್ಯಗಳಿಲ್ಲದ ಕಟ್ಟಡದಲ್ಲಿ ವಸತಿ ಶಾಲೆ ನಡೆಯುತ್ತಿದ್ದು, ಶೆಡ್‌ನಂತಹ ಕಟ್ಟಡದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮರೀಚಿಕೆಯಾಗಿದ್ದರೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂಬಂತಹ ವರ್ತನೆ ತೋರುತ್ತಿದ್ದಾರೆಂದು ಮಕ್ಕಳ ಪೋಷಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ವಸತಿ ಶಾಲೆಯ ಈ ಸ್ಥಿತಿಯನ್ನು ಮನಗಂಡ ಸರಕಾರ ಗ್ರಾಮದಲ್ಲಿ ಸುಮಾರು 5ಎಕರೆ ಪ್ರದೇಶದಲ್ಲಿ 25ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ಶಾಲೆಯ ಕಟ್ಟಡ ನಿರ್ಮಿಸಿದ್ದು, ಎಲ್ಲ ಸೌಲಭ್ಯಗಳನ್ನು ಹೊಂದಿರುವ, ಮಕ್ಕಳ ಕಲಿಕೆಗೆ ಪೂರಕವಾಗಿರುವ ಈ ಕಟ್ಟಡ ನಿರ್ಮಿಸಿ ವರ್ಷ ಸಮೀಪಿಸುತ್ತಿದ್ದರೂ ಹಾಲಿ ಇರುವ ವಸತಿ ಶಾಲೆಯ ಕಟ್ಟಡದಿಂದ ಮಕ್ಕಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಲು ನಿರ್ಲಕ್ಷ್ಯವಹಿಸಿದ್ದಾರೆ. ಕಟ್ಟಡದ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಸಂಬಂಧಿಸಿದ ಇಲಾಖೆ ಸಚಿವರ ದಿನಾಂಕ ಸಿಗುತ್ತಿಲ್ಲ ಎಂಬ ಕುಂಟು ನೆಪವೊಡ್ಡಿ ಅಧಿಕಾರಿಗಳು ಕಟ್ಟಡದ ಉದ್ಘಾಟನೆ ಹಾಗೂ ಮಕ್ಕಳ ಸ್ಥಳಾಂತರಕ್ಕೆ ಮೀನ ಮೇಷ ಎಣಿಸುತ್ತಿದ್ದಾರೆಂದು ಮಕ್ಕಳ ಪೋಷಕರು ದೂರುತ್ತಿದ್ದಾರೆ. ಅಲ್ಲದೇ ಶೆಡ್‌ನಂತಹ ವಸತಿ ಶಾಲೆಯ ಕಟ್ಟಡಕ್ಕೆ ಅಧಿಕಾರಿಗಳು ದುಬಾರಿ ಬಾಡಿಗೆ ನೀಡುತ್ತಿದ್ದು, ಹೊಸ ಕಟ್ಟಡ ನಿರ್ಮಾಣವಾಗಿದ್ದರೂ ಅಧಿಕಾರಿಗಳು ವಸತಿ ಶಾಲೆಯನ್ನು ಸ್ಥಳಾಂತರ ಮಾಡದೇ ಇನ್ನೂ ದುಬಾರಿ ಬಾಡಿಗೆಯ ಕಟ್ಟಡದಲ್ಲೇ ನಡೆಸುತ್ತಿರುವುದೇಕೆ? ಎಂಬ ಪ್ರಶ್ನೆ ಮಕ್ಕಳ ಪೋಷಕರದ್ದಾಗಿದೆ.

ಬಡ ಮಕ್ಕಳು ಮೂಲಸೌಕರ್ಯಗಳಿಲ್ಲ ಶೆಡ್‌ನಂತಹ ಕಟ್ಟಡದಲ್ಲಿ ನರಕಯಾತನೆ ಅನುಭವಿಸುತ್ತಲೇ ಶಿಕ್ಷಣ ಪಡೆಯುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ಈ ಶಾಲೆಯ ಬಡ ಮಕ್ಕಳು ಇನ್ನೆಷ್ಟು ದಿನ ಅನುಭವಿಸಬೇಕೆಂದು ಮಕ್ಕಳ ಪೋಷಕರು ಆಕ್ರೋಶ ಹೊರಹಾಕುತ್ತಿದ್ದು, ಶೀಘ್ರ ಹೊಸ ಕಟ್ಟಡಕ್ಕೆ ಮಕ್ಕಳನ್ನು ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ಸಿಂಗಟಗೆರೆ ಅಂಬೇಡ್ಕರ್ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಹಾಲಿ ಕಟ್ಟಡದಲ್ಲಿ ಮಕ್ಕಳ ಕಲಿಕೆಗೆ ಸ್ವಲ್ಪ ತೊಂದರೆ ಇದೆ. ಸುಸಜ್ಜಿತ ಹೊಸ ಕಟ್ಟಡವನ್ನು 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಸತಿ ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿದೆ. ಶೀಘ್ರ ಸ್ಥಳಾಂತರ ಮಾಡುವ ಭರವಸೆ ನೀಡಿದ್ದಾರೆ.

-ರಮೇಶ್, ಸಿಂಗಟಗೆರೆ ಅಂಬೇಡ್ಕರ್ ವಸತಿ ಶಾಲೆ ಪ್ರಾಂಶುಪಾಲ

ಸಿಂಗಟಗೆರೆ ವಸತಿ ನಿಲಯದ ಹಾಲಿ ಕಟ್ಟಡದಲ್ಲಿ ವ್ಯಾಸಂಗ ಮಾಡಲು ಕಷ್ಟವಾಗುತ್ತಿದೆ. ಮೂಲಭೂತ ಸೌಕರ್ಯಗಳು ಈ ಕಟ್ಟಡದಲ್ಲಿಲ್ಲ. ಪಾಠ ಕೇಳಲು, ರಾತ್ರಿ ನಿದ್ರೆ ಮಾಡಲೂ ಕಷ್ಟವಾಗುತ್ತಿದೆ. ಇಕ್ಕಟ್ಟಿನ ಕೊಠಡಿಗಳಲ್ಲಿ ಪಾಠ ಕೇಳಬೇಕು. ವಸತಿ ಶಾಲೆಯ ಹೊಸ ಕಟ್ಟಡ ನಿರ್ಮಾಣವಾಗಿದ್ದು, ನಮ್ಮನ್ನು ಅಲ್ಲಿಗೆ ಏಕೆ ಸ್ಥಳಾಂತರ ಮಾಡುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಉತ್ತಮ ಶಿಕ್ಷಣಕ್ಕಾಗಿ ಶೀಘ್ರ ಹೊಸ ಕಟ್ಟಡಕ್ಕೆ ನಮ್ಮನ್ನು ಸ್ಥಳಾಂತರ ಮಾಡಬೇಕು.

-ಭುವನ, ವಸತಿ ಶಾಲೆ ವಿದ್ಯಾರ್ಥಿ

share
ಕೆ.ಎಲ್.ಶಿವು
ಕೆ.ಎಲ್.ಶಿವು
Next Story
X