Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಸುಪ್ರೀಂ ಕೋರ್ಟ್ ಗೆ ಇನ್ನೊಬ್ಬರು...

ಸುಪ್ರೀಂ ಕೋರ್ಟ್ ಗೆ ಇನ್ನೊಬ್ಬರು ಗುಜರಾತಿ ನ್ಯಾಯಮೂರ್ತಿ; ಕನ್ನಡತಿ ನ್ಯಾ.ನಾಗರತ್ನ ವಿರೋಧ

ವಾರ್ತಾಭಾರತಿವಾರ್ತಾಭಾರತಿ27 Aug 2025 7:20 PM IST
share
ಸುಪ್ರೀಂ ಕೋರ್ಟ್ ಗೆ ಇನ್ನೊಬ್ಬರು ಗುಜರಾತಿ ನ್ಯಾಯಮೂರ್ತಿ; ಕನ್ನಡತಿ ನ್ಯಾ.ನಾಗರತ್ನ ವಿರೋಧ

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ನೇಮಕಾತಿ ಮಾಡುವ ಕೊಲಿಜಿಯಂ ವ್ಯವಸ್ಥೆಯು ನಿಜವಾಗಿಯೂ ಹಿರಿತನ,

ಅರ್ಹತೆ ಮತ್ತು ಪ್ರಾದೇಶಿಕ ಸಮಾನತೆಯನ್ನು ಪಾಲಿಸುತ್ತಿದೆಯೇ? ಅಥವಾ ಕೆಲವು ರಾಜ್ಯಗಳಿಗೆ ಅತಿಯಾದ ಆದ್ಯತೆ ನೀಡಲಾಗುತ್ತಿದೆಯೇ? ಎಂಬ ಪ್ರಶ್ನೆಗಳು ಎದ್ದಿವೆ.

ದೇಶದ ಅತ್ಯುನ್ನತ ನ್ಯಾಯಾಲಯಕ್ಕೆ ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡುವ

ಪ್ರಕ್ರಿಯೆಯಲ್ಲಿ ಹಿರಿತನವನ್ನು ಕಡೆಗಣಿಸುತ್ತಿದೆಯೇ ಎಂಬ ಪ್ರಶ್ನೆಗಳು ಮೂಡಿವೆ.

ಈ ಎಲ್ಲಾ ಕಠಿಣ ಪ್ರಶ್ನೆಗಳು ಉದ್ಭವವಾಗಲು ಕಾರಣ, ಸ್ವತಃ ಸುಪ್ರೀಂ ಕೋರ್ಟ್ ಕೊಲಿಜಿಯಂನ ಸದಸ್ಯೆಯಾಗಿರುವ,

ಮತ್ತು ಭವಿಷ್ಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಲಿರುವ ಕನ್ನಡತಿ, ನ್ಯಾಯಮೂರ್ತಿ ಬಿ.ವಿ. ನಾಗರತ್ನ

ಅವರ ದಿಟ್ಟ ಭಿನ್ನಮತದ ನಿಲುವು.

ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಂಚೋಲಿ ಅವರನ್ನು ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಶಿಫಾರಸ್ಸನ್ನು ಅವರು ವಿರೋಧಿಸಿದ್ದಾರೆ. ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಂಚೋಲಿ ಅವರು ಹನ್ನೊಂದು ವರ್ಷಗಳ ಕಾಲ ಗುಜರಾತ್ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ ಬಳಿಕ ಜುಲೈ 24, 2023 ರಲ್ಲಿ ಪಾಟ್ನಾ ಹೈಕೋರ್ಟ್ ಗೆ ವರ್ಗಾವಣೆಯಾಗಿದ್ದರು. 21 ಜುಲೈ 2025ರಲ್ಲಿ ಅವರು ಪಾಟ್ನಾ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು.

ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಕೊಲಿಜಿಯಂನ ಸದಸ್ಯರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಂಚೋಲಿ ಅವರನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಮಾಡಲಾದ ಶಿಫಾರಸ್ಸಿಗೆ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದಾರೆ ಎಂದು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ವಿಕ್ರಮ್ ನಾಥ್, ಜೆ.ಕೆ. ಮಹೇಶ್ವರಿ ಹಾಗೂ ನ್ಯಾಯಮೂರ್ತಿ ನಾಗರತ್ನ ಅವರನ್ನು ಒಳಗೊಂಡ ಐದು ಸದಸ್ಯರ ಕೊಲಿಜಿಯಂ, ನ್ಯಾಯಮೂರ್ತಿ ಪಂಚೋಲಿ ಅವರ ವಿಷಯದಲ್ಲಿ 4-1ರ ವಿಭಜಿತ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಲ್ಲಿ, ಸುಪ್ರೀಂ ಕೋರ್ಟ್‌ ಕೋಲಿಜಿಯಂ ನಲ್ಲಿರುವ ಏಕೈಕ ಮಹಿಳಾ ನ್ಯಾಯಾಧೀಶರಾದ ನಾಗರತ್ನ ಅವರು, ಈ ನೇಮಕಾತಿಯ ಕುರಿತು ಅಪರೂಪದ ಮತ್ತು ವಿವರವಾದ ಭಿನ್ನಮತದ ಟಿಪ್ಪಣಿಯನ್ನು ನೀಡಿದ್ದಾರೆ.

'ಇಂಡಿಯನ್ ಎಕ್ಸ್‌ಪ್ರೆಸ್' ವರದಿಯ ಪ್ರಕಾರ, ನ್ಯಾಯಮೂರ್ತಿ ನಾಗರತ್ನ ಅವರು ನ್ಯಾಯಮೂರ್ತಿ ಪಂಚೋಲಿ ಅವರ ಒಟ್ಟಾರೆ ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಉಲ್ಲೇಖಿಸಿ ಈ ಶಿಫಾರಸ್ಸನ್ನು ವಿರೋಧಿಸಿದ್ದಾರೆ. ನ್ಯಾಯಮೂರ್ತಿ ಪಂಚೋಲಿ ಅವರು ಪ್ರಸ್ತುತ ಹೈಕೋರ್ಟ್ ನ್ಯಾಯಾಧೀಶರ ಅಖಿಲ ಭಾರತ ಹಿರಿತನದ ಪಟ್ಟಿಯಲ್ಲಿ 57ನೇ ಸ್ಥಾನದಲ್ಲಿದ್ದಾರೆ.

"ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ಮೂರು ಅಂಶಗಳನ್ನು ತನ್ನ ಆಯ್ಕೆಯ ಮಾನದಂಡಗಳಾಗಿ ಒತ್ತಿಹೇಳುತ್ತದೆ. ಹೈಕೋರ್ಟ್‌ ಗಳ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಾಧೀಶರ ಅಖಿಲ ಭಾರತ ಆಧಾರದ ಮೇಲೆ ಸಂಯೋಜಿತ ಹಿರಿತನ, ಪ್ರಾತಿನಿಧ್ಯದ ತತ್ವ, ಮತ್ತು 'ಅರ್ಹತೆ ಮತ್ತು ಪ್ರಾಮಾಣಿಕತೆ'," ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿಯ ಪ್ರಕಾರ, ನ್ಯಾಯಮೂರ್ತಿ ನಾಗರತ್ನ ಅವರ ಕಳವಳಕ್ಕೆ ಮುಖ್ಯ ಕಾರಣ, ಕೇವಲ ಮೂರು ತಿಂಗಳೊಳಗೆ ಮೂಲತಃ ಗುಜರಾತ್ ಹೈಕೋರ್ಟ್‌ನಿಂದ ಮತ್ತೊಬ್ಬ ನ್ಯಾಯಾಧೀಶರನ್ನು ಶಿಫಾರಸ್ಸು ಮಾಡುತ್ತಿರುವುದು. ಇದಕ್ಕೂ ಮುನ್ನ, ಗುಜರಾತ್ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ ಗೆ ನೇಮಕ ಮಾಡಲಾಗಿತ್ತು.

ಕಳೆದ ಮೇ ತಿಂಗಳಿನಲ್ಲಿ ನ್ಯಾಯಮೂರ್ತಿ ಪಂಚೋಲಿ ಅವರ ಬಡ್ತಿಯನ್ನು ಮೊದಲ ಬಾರಿಗೆ ಚರ್ಚೆಗೆ ತಂದಾಗ, ಕೊಲಿಜಿಯಂನ ಕನಿಷ್ಠ ಇಬ್ಬರು ನ್ಯಾಯಾಧೀಶರು ಅವರ ಹಿರಿತನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ. ಹಿರಿತನದ ಕುರಿತಾದ ಈ ಕಳವಳಗಳನ್ನು ಪರಿಹರಿಸಲು, ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿ, ನ್ಯಾಯಮೂರ್ತಿ ಪಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿತ್ತು. ಈ ನಿರ್ಧಾರಕ್ಕೆ ಕೇಂದ್ರ ಸರ್ಕಾರವು ಜುಲೈ 14, 2025 ರಂದು ಅನುಮೋದನೆ ನೀಡಿತ್ತು.

'ಹಿಂದೂಸ್ತಾನ್ ಟೈಮ್ಸ್' ವರದಿಯ ಪ್ರಕಾರ, ನ್ಯಾಯಮೂರ್ತಿ ಪಂಚೋಲಿ ಅವರ ಶಿಫಾರಸ್ಸನ್ನು ಕೈಬಿಡಲಾಗಿದೆ ಎಂದೇ ನ್ಯಾಯಮೂರ್ತಿ ನಾಗರತ್ನ ಅವರು ಭಾವಿಸಿದ್ದರು. ಹೀಗಾಗಿ, ಕೇವಲ ಮೂರು ತಿಂಗಳಲ್ಲಿ ಈ ವಿಷಯ ಮತ್ತೆ ಮುನ್ನೆಲೆಗೆ ಬಂದಾಗ ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದು ಅವರನ್ನು ಲಿಖಿತ ಭಿನ್ನಮತವನ್ನು ನೀಡಲು ಪ್ರೇರೇಪಿಸಿತು. ಏಕೆಂದರೆ, ಈ ಶಿಫಾರಸ್ಸು ಕೇವಲ ನ್ಯಾಯಮೂರ್ತಿ ಅಂಜಾರಿಯಾ ಅವರ ಹಿರಿತನವನ್ನು ಮಾತ್ರವಲ್ಲದೆ, ಗುಜರಾತ್ ಹೈಕೋರ್ಟ್‌ನ ಇತರ ಹಿರಿಯ ನ್ಯಾಯಾಧೀಶರ ಹಿರಿತನವನ್ನು ಕೂಡ ಬೈಪಾಸ್ ಮಾಡಿದಂತೆ ಆಗುತ್ತದೆ. ಇದರ ಜೊತೆಗೆ, ಸುಪ್ರೀಂ ಕೋರ್ಟ್‌ ನಲ್ಲಿ ಗುಜರಾತ್ ಹೈಕೋರ್ಟ್‌ ನ ಅತಿಯಾದ ಪ್ರಾತಿನಿಧ್ಯದ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ ಎನ್ನಲಾಗಿದೆ.

ಅವರ ಟಿಪ್ಪಣಿಯು, ಈ ಎಲ್ಲಾ ಕಳವಳಗಳ ನಡುವೆಯೂ ನ್ಯಾಯಮೂರ್ತಿ ಪಂಚೋಲಿ ಅವರನ್ನು ಮುಂಬಡ್ತಿ ನೀಡುವುದು ನ್ಯಾಯದಾನದ ಆಡಳಿತಕ್ಕೆ ಪ್ರತಿಕೂಲವಾಗಲಿದೆ ಮತ್ತು "ಕೊಲಿಜಿಯಂ ವ್ಯವಸ್ಥೆಯು ಈಗಲೂ ಉಳಿಸಿಕೊಂಡಿರುವ ಅಲ್ಪಸ್ವಲ್ಪ ವಿಶ್ವಾಸಾರ್ಹತೆಗೂ" ಅಪಾಯವನ್ನುಂಟುಮಾಡಲಿದೆ ಎಂದು ಎಚ್ಚರಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಹೇಳುತ್ತದೆ.

ಈಗ ತೆಗೆದುಕೊಳ್ಳುವ ಆಯ್ಕೆಗಳು, ನ್ಯಾಯಾಲಯವನ್ನು ಹೇಗೆ ನಿರ್ವಹಿಸಲಾಗುತ್ತದೆ ಮತ್ತು ಗ್ರಹಿಸಲಾಗುತ್ತದೆ ಎಂಬುದರ ಮೇಲೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಸಹ ಆ ಟಿಪ್ಪಣಿ ಒತ್ತಿಹೇಳಿದೆ.

ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಬೇಲಾ ತ್ರಿವೇದಿ ಅವರು ಈ ವರ್ಷದ ಮೇ ಮತ್ತು ಜೂನ್‌ನಲ್ಲಿ ನಿವೃತ್ತರಾದ ನಂತರ, ಗುಜರಾತ್ ಹೈಕೋರ್ಟ್‌ ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಾತಿನಿಧ್ಯ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯಮೂರ್ತಿ ಪಂಚೋಲಿ ಮತ್ತು ಅಂಜಾರಿಯಾ ಅವರ ಶಿಫಾರಸ್ಸುಗಳು ಮುನ್ನೆಲೆಗೆ ಬಂದಿದ್ದವು. ಈ ನಿವೃತ್ತಿಗಳಿಂದಾಗಿ, ಗುಜರಾತ್ ಅನ್ನು ಪ್ರತಿನಿಧಿಸುವ ಏಕೈಕ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪರ್ದಿವಾಲಾ ಮಾತ್ರ ಉಳಿದಿದ್ದರು.

ಸುಪ್ರೀಂ ಕೋರ್ಟ್‌ನಲ್ಲಿ ಮಂಜೂರಾದ ನ್ಯಾಯಮೂರ್ತಿಗಳ ಸಂಖ್ಯೆ 34 ಆಗಿದ್ದು, ಪ್ರತಿಯೊಂದು ಹೈಕೋರ್ಟ್‌ ಗೂ ಸಾಕಷ್ಟು ಪ್ರಾದೇಶಿಕ ಪ್ರಾತಿನಿಧ್ಯವನ್ನು ನೀಡಲು ಪರಿಗಣಿಸಲಾಗುತ್ತದೆ. ಪ್ರಸ್ತುತ ಬಾಂಬೆ, ಅಲಹಾಬಾದ್ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗಳಿಂದ ತಲಾ ಮೂವರು ನ್ಯಾಯಾಧೀಶರಿದ್ದಾರೆ.

ಆದರೂ, ನ್ಯಾಯಮೂರ್ತಿ ನಾಗರತ್ನ ಅವರ ಕಳವಳಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ಇತರ ಹೈಕೋರ್ಟ್‌ ಗಳ ಕಡಿಮೆ ಪ್ರಾತಿನಿಧ್ಯವನ್ನು ಪ್ರತಿಬಿಂಬಿಸಿವೆ.

ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಈ ಭಿನ್ನಮತವು ಕೇವಲ ಒಂದು ನೇಮಕಾತಿಯ ವಿರೋಧವಲ್ಲ, ಬದಲಿಗೆ ಇದು ನ್ಯಾಯಾಂಗದ ಆತ್ಮಾವಲೋಕನಕ್ಕೆ ಕರೆಗಂಟೆಯಾಗಿದೆ. ಅವರ ಎಚ್ಚರಿಕೆಯ ಮಾತುಗಳು "ಕೊಲಿಜಿಯಂ ವ್ಯವಸ್ಥೆಯ ವಿಶ್ವಾಸಾರ್ಹತೆ"ಯ ಮೇಲೆ ಬೆಳಕು ಚೆಲ್ಲುತ್ತವೆ.

ಒಂದೆಡೆ, ನ್ಯಾಯಾಂಗದ ಸ್ವಾತಂತ್ರ್ಯವನ್ನು ಕಾಪಾಡಲು ಕೊಲಿಜಿಯಂ ವ್ಯವಸ್ಥೆ ಅಗತ್ಯ ಎನ್ನುವ ವಾದವಿದೆ. ಮತ್ತೊಂದೆಡೆ, ಅದರ ಕಾರ್ಯವೈಖರಿಯಲ್ಲಿ ಪಾರದರ್ಶಕತೆಯ ಕೊರತೆ, ಸ್ವಜನಪಕ್ಷಪಾತದ ಆರೋಪಗಳು ಪದೇ ಪದೇ ಕೇಳಿಬರುತ್ತಿವೆ.

ನ್ಯಾಯಮೂರ್ತಿ ನಾಗರತ್ನ ಅವರು ಎತ್ತಿರುವ ಹಿರಿತನ ಮತ್ತು ಪ್ರಾದೇಶಿಕ ಅಸಮತೋಲನದ ಪ್ರಶ್ನೆಗಳು ಈ ಆರೋಪಗಳಿಗೆ ಮತ್ತಷ್ಟು ಪುಷ್ಟಿ ನೀಡುತ್ತವೆ.

ಈ ನಡುವೆ, ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ, ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ 14 ವಕೀಲರ ಹೆಸರನ್ನು ಶಿಫಾರಸು ಮಾಡಿದ್ದು, ಇದರಲ್ಲಿ ಹಾಲಿ ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ಆರ್. ಗವಾಯಿ ಅವರ ಸಂಬಂಧಿ ರಾಜ್ ದಾಮೋದರ್ ವಾಕೋಡೆ ಅವರ ಹೆಸರೂ ಸೇರಿದೆ. ವರದಿಗಳ ಪ್ರಕಾರ, ಸಿಜೆಐ ಗವಾಯಿ ಅವರು ತಮ್ಮ ಸಂಬಂಧಿಯ ಹೆಸರು ಚರ್ಚೆಗೆ ಬಂದಾಗ ಕೊಲಿಜಿಯಂ ಸಭೆಯಿಂದ ಹೊರಗುಳಿದಿದ್ದರೂ, ಈ ಶಿಫಾರಸು ನ್ಯಾಯಾಂಗ ನೇಮಕಾತಿಗಳಲ್ಲಿ ‘ಸ್ವಜನಪಕ್ಷಪಾತ’ ಮತ್ತು ‘ಆಶ್ರಿತರಿಗೆ ಅನುಕೂಲ’ ಮಾಡಿಕೊಡುವ ಆರೋಪಗಳಿಗೆ ಮತ್ತಷ್ಟು ಇಂಬು ನೀಡಿದೆ.

ಇದು, ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜೊತೆಗೆ, ಕೌಟುಂಬಿಕ ಸಂಬಂಧಗಳೂ ನೇಮಕಾತಿಯಲ್ಲಿ ಪಾತ್ರ ವಹಿಸುತ್ತವೆಯೇ ಎಂಬ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕಿದ್ದು, ಕೊಲಿಜಿಯಂ ವ್ಯವಸ್ಥೆಯ ಮೇಲಿನ ವಿಶ್ವಾಸಾರ್ಹತೆಯನ್ನು ಮತ್ತಷ್ಟು ಪರೀಕ್ಷೆಗೆ ಒಡ್ಡಿದೆ.

ಈಗ ನ್ಯಾಯಮೂರ್ತಿ ಪಂಚೋಲಿ ಅವರ ಕುರಿತ 4-1ರ ವಿಭಜಿತ ಶಿಫಾರಸನ್ನು ಕೇಂದ್ರ ಸರ್ಕಾರ ಹೇಗೆ ಪರಿಗಣಿಸಲಿದೆ? ಕೊಲಿಜಿಯಂನೊಳಗಿನ ಈ ಸ್ಪಷ್ಟ ಭಿನ್ನಾಭಿಪ್ರಾಯವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುವುದೇ ಅಥವಾ ಬಹುಮತದ ನಿರ್ಧಾರಕ್ಕೆ ಅಂಕಿತ ಹಾಕುವುದೇ ಎಂಬುದು ಕುತೂಹಲಕಾರಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X