ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ತಜ್ಞ ವೈದ್ಯರ ತಂಡದ ರವಾನೆ
ಬೆಂಗಳೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ನೀಡಿದ್ದು, ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ತೀವ್ರ ನಿಗಾ ವಹಿಸಿದ್ದಾರೆ.
ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು.
ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ.
Next Story