Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಾಸನ | ಗಣೇಶ ಮೆರವಣಿಗೆ ವೇಳೆ ಜನರ ಮೇಲೆ...

ಹಾಸನ | ಗಣೇಶ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್; ಮೃತರ ಸಂಖ್ಯೆ 9ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ12 Sept 2025 11:03 PM IST
share
ಹಾಸನ | ಗಣೇಶ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್; ಮೃತರ ಸಂಖ್ಯೆ 9ಕ್ಕೆ ಏರಿಕೆ

ಹಾಸನ : ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಸುಮಾರು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ಘಟನೆಯ ವಿವರ:

ಈ ಘಟನೆ ರಾತ್ರಿ 8:30ಕ್ಕೆ ರಾಷ್ಟ್ರೀಯ ಹೆದ್ದಾರಿಯ ಮೊಸಳೆಹೊಸಳ್ಳಿ ಬಳಿ ನಡೆದಿದೆ.

ಹಾಸನದಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಟ್ರಕ್ ವೊಂದು ಓವರ್‌ಟೇಕ್ ಮಾಡುವ ರಭಸದಲ್ಲಿ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ನಿಯಂತ್ರಣವನ್ನು ಕಳೆದುಕೊಂಡಿದೆ. ನಂತರ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಗುಂಪಿನ ಮೇಲೆ ನೇರವಾಗಿ ಹರಿದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಮೆರವಣಿಗೆಯಲ್ಲಿ ಸ್ಥಳೀಯ ಗ್ರಾಮಸ್ಥರು, ವಿದ್ಯಾರ್ಥಿಗಳು ಸೇರಿದಂತೆ ಭಕ್ತರು ಭಾಗವಹಿಸುತ್ತಿದ್ದರು.

ಮೃತರಲ್ಲಿ ಗೊಕುಲ್ (17) ಮತ್ತು ಈಶ್ವರ್ (17) ಎಂಬ ಇಬ್ಬರು ಸ್ಥಳೀಯ ಗ್ರಾಮಸ್ಥರಾಗಿದ್ದಾರೆ.

ಗಾಯಾಳುಗಳಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದು, ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಮಾಹಿತಿ ಪ್ರಕಾರ, ಲಾರಿಯ ಚಾಲಕ ರಭಸದಿಂದ ಆಟೋರಿಕ್ಷಾ ಓವರ್‌ಟೇಕ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡಿದ್ದಾನೆ. ಚಾಲಕನನ್ನು ಸ್ಥಳದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ಮಾಹಿತಿ ಪಡೆದ ಸಂಸದ ಶ್ರೇಯಸ್ ಪಟೇಲ್ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಎಂಎಲ್‌ಸಿ ಸೂರಜ್ ರೇವಣ್ಣ ಸ್ಥಳಕ್ಕೆ ಸ್ಥಳಕ್ಕೆ ತೆರಳಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ, ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ :

"ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ"

ಸಿದ್ದರಾಮಯ್ಯ, ಮುಖ್ಯಮಂತ್ರಿ

"ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ. ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು"

ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X