ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿ ಭಂಗ ಮಾಡಿದರೆ ಪೊಲೀಸರಿಂದ ಸೂಕ್ತ ಕ್ರಮ : ಸಿಎಂ ಸಿದ್ದರಾಮಯ್ಯ

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿ ಭಂಗ ತರುವ ಕೆಲಸ ಮಾಡಿದರೆ ಪೊಲೀಸರು ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಮಂಡಕಳ್ಳಿ ವಿಮಾನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ, ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಚೋಧನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ದಸರಾ ಮುಗಿಯುವವರಗೆ ಗಡಿಪಾರು ಮಾಡಬೇಕು ಎಂದು ಕೆಲವು ಸಂಘಟನೆಗಳು ಒತ್ತಾಯ ಮಾಡುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ಧರಾಮಯ್ಯ, ಈ ಬಗ್ಗೆ ಪೊಲೀಸರು ಕ್ರಮಕೈಗೊಳ್ಳುತ್ತಾರೆ. ನಾನು ಹೇಳಲು ಹೋಗಲ್ಲ, ಅವರು ಶಾಂತಿಭಂಗ ತರುವ ಕೆಲಸ ಮಾಡಿದರೆ ಪೊಲೀಸರು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು.
ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು, ಬಿಜೆಪಿಯವರು ಪ್ರಚೋದನಾಕಾರಿ ಭಾಷಣ ಮಾಡಿದರೆ ಏನು ಮಾಡೋದು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದರು.