Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಮದ್ದೂರು ಪ್ರಕರಣ | ತಪ್ಪಿತಸ್ಥರನ್ನು...

ಮದ್ದೂರು ಪ್ರಕರಣ | ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ, ಮುಲಾಜಿಲ್ಲದೆ ಕಾನೂನು ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ9 Sept 2025 6:00 PM IST
share
ಮದ್ದೂರು ಪ್ರಕರಣ | ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ, ಮುಲಾಜಿಲ್ಲದೆ ಕಾನೂನು ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಯಾರು ಕಾರಣಕರ್ತರಾಗಿದ್ದಾರೋ, ಯಾರು ತಪ್ಪಿತಸ್ಥರಿದ್ದಾರೋ ಅವರನ್ನು ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರು ಗಲಾಟೆಗೆ ಹಿಂದೂಗಳಿರಬಹುದು ಅಥವಾ ಮುಸಲ್ಮಾನರಾಗಿರಬಹುದು ಯಾರೇ ಕಾರಣರಾಗಿದ್ದರೂ ಅವರನ್ನು ರಕ್ಷಣೆ ಮಾಡಲು ಹೋಗುವುದಿಲ್ಲ. ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ಮುಲಾಜಿಲ್ಲದೆ ಶಿಸ್ತಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪುನುರಚ್ಚರಿಸಿದರು.

ಈಗಾಗಲೇ ಪೊಲೀಸರು ಸಿಸಿಟಿವಿ, ವಿಡಿಯೋಗಳ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದು, ಯಾರು ಯಾರು ಈ ಗಲಭೆಯಲ್ಲಿ ಭಾಗಿಯಾಗಿದ್ದರೆ, ಗಲಾಟೆ ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ 15 ಮಂದಿಯನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಉಳಿದವರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಇಡೀ ರಾಜ್ಯದಲ್ಲಿ ಗಣೋಶೋತ್ಸವಗಳು ಶಾಂತಿಯುತವಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಈ ರೀತಿಯ ಗಲಾಟೆ ನಡೆದಿದೆ ಎಂದರೆ ಏನರ್ಥ, ಈ ಗಲಾಟೆಗೆ ಪ್ರಚೋದನೆ ನೀಡಿದವರು, ಭಾಗಿಯಾದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಗಣೇಶೋತ್ಸವದ ಸಂದರ್ಭದಲ್ಲಿ ಪೊಲೀಸರ ಭದ್ರತೆ ಒಂದು ಕಡೆಯಾದರೆ ಜನರು ಸಹ ಶಾಂತಿಯಿಂದ ನಡೆದುಕೊಳ್ಳಬೇಕು. ಕಲ್ಲು ಎಸೆಯುವುದು, ಪ್ರಚೋದನೆ ಮಾಡುವುದು ಸರಿಯಲ್ಲ. ಈ ಗಲಾಟೆಯಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸುತ್ತಾರೆ. ಇಂತಹ ಘಟನೆಗಳಿಂದ ಅನೇಕ ಬೆಳವಣಿಗೆಗಳಾಗುತ್ತವೆ. ಹಾಗಾಗಿ ಹೊರಗಡೆಯಿಂದ ಬಂದವರು ಈ ರೀತಿ ಗಲಾಟೆ ಮಾಡುವುದಾಗಲೀ, ಪ್ರಚೋದನೆ ಮಾಡುವ ಕೆಲಸವನ್ನಾಗಲೀ ಮಾಡಬಾರದು ಎಂದು ಅವರು ಹೇಳಿದರು.

ಯಾರೂ ಸಹ ಕಾನೂನು ಕೈಗೆತ್ತಿಕೊಳ್ಳಲು ನಾವು ಅವಕಾಶ ಕೊಡುವುದಿಲ್ಲ ಎಂದ ಅವರು, ಒಂದು ವೇಳೆ ಈ ಗಲಾಟೆ ಪೂರ್ವನಿಯೋಜಿತ ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗುತ್ತದೆ ಎಂದರು.

ಈ ವಿಚಾರದಲ್ಲಿ ಪೊಲೀಸರ ಭದ್ರತಾ ವೈಫಲ್ಯ ಎನ್ನುವುದು ಸರಿಯಲ್ಲ. ಪೊಲೀಸರು ಕಲ್ಲು ಹೊಡೆಯಿರಿ ಎಂದು ಹೇಳಿದ್ದರಾ, ಮೊದಲು ಯಾರು ತಪ್ಪು ಮಾಡಿದ್ದಾರೋ ಆ ಬಗ್ಗೆ ತನಿಖೆಯಾಗಲಿ. ಆ ನಂತರ ಭದ್ರತಾ ವೈಫಲ್ಯ ಆಗಿದೆಯೋ, ಇಲ್ಲವೋ ಎನ್ನುವ ಬಗ್ಗೆ ಗಮನ ಹರಿಸುತ್ತೇವೆ ಎಂದು ಹೇಳಿದರು.

ಒಟ್ಟಾರೆ ಶಾಂತಿ ಸೌಹಾರ್ದತೆಯಿಂದ ಬದುಕು ನಡೆಸಲು ಎಲ್ಲರೂ ಸಹಕರಿಸಬೇಕು. ಇಂತಹ ಪ್ರಚೋದನಾಕಾರಿಗಳಿಗೆ ಆಸ್ಪದ ನೀಡಬಾರದು. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಇಂದು ಎರಡು ಸಮುದಾಯದವರ ಶಾಂತಿ ಸಭೆ ಸಹ ಕರೆಯಲಾಗಿದೆ. ಎರಡು ಸಮುದಾಯದವರು ಸಹ ಶಾಂತಿಯುತವಾಗಿ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X